ತಹಶೀಲ್ದಾರ್ ಬಳಿ ದಲಿತ ಮುಖಂಡರ ಕುಂದುಕೊರತೆಗಳ ಚರ್ಚೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕು ಕಚೇರಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ತಹಶೀಲ್ದಾರ್ ಗಗನ ಸಿಂಧು ಅವರನ್ನು ಭೇಟಿಯಾಗಿ, ದಲಿತರ ಕುಂದುಕೊರತೆಗಳು ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಸಾದಲಿ ಸಮೀಪದ ಕೋಚಿಮುಲ್ ಶೀಥಲೀಕರಣ ಘಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸದ ಬಗ್ಗೆ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಸಿಬ್ಬಂದಿಗಳ ಒತ್ತಾಯದ ಮೇರೆಗೆ ಮೂರು ದಿನಗಳ ಬಳಿಕ ಕೇವಲ ಫೋಟೋ ಇಟ್ಟುಕೊಂಡು ಜಯಂತಿ ಆಚರಣೆ ನಡೆದಿದ್ದು, ಅದು ಕಾಟಾಚಾರವೆಂದರು. ತಕ್ಷಣವೇ ತಹಶೀಲ್ದಾರ್ ಗಗನ ಸಿಂಧು ಅವರು ಘಟಕದ ವ್ಯವಸ್ಥಾಪಕ ನಾರಾಯಣಸ್ವಾಮಿ ಅವರಿಗೆ ಕರೆ ಮಾಡಿ ಸ್ಪಷ್ಟನೆ ಕೇಳಿ, ಕೇವಲ ನೆಪ ಹೇಳದೆ ಜಯಂತಿ ಆಚರಣೆ ಮಾಡದಿರುವುದು ತಪ್ಪು ಎಂದು ತರಾಟೆಗೆ ತೆಗೆದುಕೊಂಡು, ಕಚೇರಿಗೆ ಬಂದು ವಿವರಿಸಲು ಸೂಚಿಸಿದರು.

ಇದೇ ಸಂದರ್ಭದಲ್ಲಿ ಸೀತಹಳ್ಳಿಯ ಸರ್ವೆ ನಂ. 29ರಲ್ಲಿ 23 ಗುಂಟೆ ಜಮೀನನ್ನು ನಿವೇಶನರಹಿತ ದಲಿತರಿಗೆ ಹಂಚಿಕೆ ಮಾಡುವಂತೆ ಉಪ ವಿಭಾಗಾಧಿಕಾರಿಗಳ ಆದೇಶವಾಗಿದ್ದರೂ, ಹಲವು ವರ್ಷಗಳಿಂದ ಕ್ರಮ ಕೈಗೊಳ್ಳದಿರುವುದಕ್ಕೆ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ತಹಶೀಲ್ದಾರ್ ಅವರು ಕಡತ ಪತ್ತೆಯಾಗುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದು, ಸಿಕ್ಕ ಕೂಡಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಬಗರ್ ಹುಕುಂ ಜಮೀನಿನ ದಾಖಲೆ ವಿಲೇವಾರಿ ಪ್ರಕ್ರಿಯೆ ಇನ್ನೂ ಪೂರ್ಣವಾಗದಿರುವುದು, ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ಬಾಕಿ ಉಳಿದಿರುವುದನ್ನು ಅವರು ತಿಳಿಸಿದರು. ಜೊತೆಗೆ ದಲಿತ ರೈತರು ವರ್ಷಗಳಿಂದ ಫಾರಂ 53 ಸಲ್ಲಿಸಿದರೂ ದರಕಾಸ್ತು ಸಮಿತಿ ರಚನೆಯಿಲ್ಲದ ಕಾರಣ ಜಮೀನು ಮಂಜೂರಾತಿ ಆಗದಿರುವುದನ್ನು ಗಮನಕ್ಕೆ ತಂದರು.

ಎಲ್ಲಾ ವಿಷಯಗಳನ್ನು ಆಲಿಸಿದ ತಹಶೀಲ್ದಾರ್ ಗಗನ ಸಿಂಧು ಅವರು ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮತ್ತೊಮ್ಮೆ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಕಂದಾಯ ನಿರೀಕ್ಷಕ ವೇಣುಗೋಪಾಲ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದಢಂಘಟ್ಟ ತಿರುಮಲೇಶ್, ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!