Home News ಫಲಾನುಭವಿಗಳಿಗೆ ಪಂಪು ಮೋಟರ್ ವಿತರಣೆ

ಫಲಾನುಭವಿಗಳಿಗೆ ಪಂಪು ಮೋಟರ್ ವಿತರಣೆ

0
Sidlaghatta dmall and marginal farmers Motor Pump Distribution

Sidlaghatta : ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮಗಳು ಪರಿಶಿಷ್ಟ ಜಾತಿ/ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಹಾಯಧನ ಮತ್ತು ಸಾಲದೊಂದಿಗೆ ಪಂಪ್ ಸೆಟ್, ಬೋರ್‌ವೆಲ್ ಕೊರೆತ ಹಾಗೂ ವಿದ್ಯುದ್ದೀಕರಣ (ಗಂಗಾ ಕಲ್ಯಾಣ ಯೋಜನೆ) ಸೌಲಭ್ಯ ಒದಗಿಸುತ್ತವೆ. ಸರ್ಕಾರದಿಂದ ಸಿಗುವ ಈ ಸವಲತ್ತುಗಳ ಸದುಪಯೋಗ ಮಾಡಿಕೊಂಡು ರೈತರು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ 24 ಅರ್ಹ ಫಲಾನುಭವಿಗಳಿಗೆ ಪಂಪು ಮೋಟರ್ ವಿತರಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸಿಗುವ ವಿವಿಧ ರೀತಿಯ ಸೌಲಭ್ಯಗಳು ಹಾಗೂ ಅನುದಾನಗಳು ನೇರವಾಗಿ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು.

ರಾಜ್ಯದ ಜನತೆ ಕಟ್ಟುವ ತೆರಿಗೆ ಹಣದಿಂದ ಸರ್ಕಾರ ರೂಪಿಸುವ ಯಾವುದೇ ಯೋಜನೆಯಾಗಲಿ ಅದು ಯಶಸ್ವಿಯಾಗಬೇಕಾದರೆ ಅರ್ಹ ಫಲಾನುಭವಿಗೆ ಆ ಯೋಜನೆ ತಲುಪಬೇಕು. ತಲುಪಿಸುವ ಕೆಲಸ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲಿರುತ್ತದೆ ಎಂದರು.

ದುರ್ಬಲರು ಆರ್ಥಿಕವಾಗಿ ಮುಂದುವರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಸುಮಾರು 24 ಫಲಾನುಭವಿಗಳಿಗೆ ಟೆಕ್ಸ್ಮೋ ಕಂಪನಿಯ ಪಂಪು ಮೋಟರ್ ಕೇಬಲ್ ವಿತರಣೆ ಮಾಡಲಾಯಿತು.

ಪಿ.ಎಲ್‌.ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ತಾ.ಪಂ ಮಾಜಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version