Sidlaghatta, Chikkaballapur : ಶಿಡ್ಲಘಟ್ಟ ನಗರದ ಡಾಲ್ಫಿನ್ CBSE ಶಾಲೆಯಲ್ಲಿ ಶುಕ್ರವಾರದಂದು ರಾಷ್ಟ್ರದ ಲೋಹಪುರುಷ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಅಂಗವಾಗಿ “ರನ್ ಫಾರ್ ಯುನಿಟಿ” (Run for Unity) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸ್ಥೆಯ ಅಧ್ಯಕ್ಷ ಶ್ರೀ ಎ. ನಾಗರಾಜ್ ಮಾತನಾಡಿ, “ಸರ್ದಾರ್ ಪಟೇಲ್ ಅವರು ದೇಶದ ಸಮಗ್ರತೆ ಮತ್ತು ಏಕತೆಗೆ ಜೀವಂತ ಸಂಕೇತ. ಅವರು ಭಾರತವನ್ನು ಅಖಂಡ ರಾಷ್ಟ್ರವನ್ನಾಗಿ ರೂಪಿಸಿದ ಮಹಾನ್ ನಾಯಕರು. ಅವರ ಆದರ್ಶಗಳನ್ನು ಪಾಲಿಸಿ, ವಿದ್ಯಾರ್ಥಿಗಳು ದೇಶದ ಏಕತೆಗಾಗಿ ಸದಾ ಶ್ರಮಿಸಬೇಕು” ಎಂದು ಕರೆ ನೀಡಿದರು.
ಈ ವೇಳೆ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆಯ ಮೂಲಕ ಜನರಲ್ಲಿ ಏಕತೆ, ಸಹಕಾರ ಮತ್ತು ದೇಶಭಕ್ತಿ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎಲ್. ಮುನಿಕೃಷ್ಣಪ್ಪ ಉಪಸ್ಥಿತರಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಲು ಸೂಕ್ತ ಮಾರ್ಗದರ್ಶನ ನೀಡಿದರು. NCC ವಿದ್ಯಾರ್ಥಿಗಳು, ಡಾಲ್ಫಿನ್ ವಿದ್ಯಾ ಸಂಸ್ಥೆಯ ಸಿಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು ಹಾಗೂ ಎನ್‌ಸಿಸಿ ಅಧಿಕಾರಿ ಭರತ್, ಎಲ್ಲ ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
For Daily Updates WhatsApp ‘HI’ to 7406303366




 
                                    




