Sidlaghatta : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಶುಕ್ರವಾರ ಆಯೋಜಿಸಲಾದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ನಗರದ ಡಾಲ್ಫಿನ್ಸ್ ಸಂಸ್ಥೆಗೆ ಜಿಲ್ಲಾ ಖಾಸಗಿ ಶಾಲೆ ಮತ್ತು ಕಾಲೇಜುಗಳ ಒಕ್ಕೂಟದಿಂದ ಅತ್ಯುತ್ತಮ ಆಡಳಿತ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿಯನ್ನು ಸಂಸ್ಥೆಯ ಅಧ್ಯಕ್ಷ ಎ. ನಾಗರಾಜ್ ಅವರಿಗೆ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ವಿತರಿಸಿದರು.
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪಕಾರ್ಯದರ್ಶಿ ಅತಿಕ್ ಪಾಷಾ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ. ರಮೇಶ್, ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಬಿ.ವಿ. ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.