21.1 C
Sidlaghatta
Tuesday, October 28, 2025

ಶೈಕ್ಷಣಿಕ ಪ್ರವಾಸಗಳಿಂದ ವಿದ್ಯಾರ್ಥಿಗಳ ಸಂಪೂರ್ಣ ಬೆಳವಣಿ

- Advertisement -
- Advertisement -

Sidlaghatta : ಶೈಕ್ಷಣಿಕ ಪ್ರವಾಸಗಳು ವಿದ್ಯಾರ್ಥಿಗಳ ಜೀವನದಲ್ಲಿ ನಿರ್ಣಾಯಕವಾಗಿದ್ದು, ಅವು ಅವರ ಕಲಿಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಮಹತ್ವದ ಪಾತ್ರ ವಹಿಸುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರಕುಮಾರ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ, ಪ್ರೌಢಶಾಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಐದು ದಿನಗಳ “ಕರ್ನಾಟಕ ದರ್ಶನ” ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.

“ಪ್ರವಾಸದ ಸಮಯದಲ್ಲಿ ವಿದ್ಯಾರ್ಥಿಗಳು ಸ್ಥಳಗಳ ಐತಿಹಾಸಿಕತೆ, ಪರಿಸರದ ವೈವಿಧ್ಯತೆಯನ್ನು ನೇರವಾಗಿ ಅನುಭವಿಸುವ ಮೂಲಕ ಅದನ್ನು ಶಾಶ್ವತವಾಗಿ ತಮ್ಮ ಮನಸ್ಸಿನಲ್ಲಿ ನೆನಪಾಗಿಸಿಕೊಳ್ಳಬಹುದು. ಇದು ಪಾಠಪುಸ್ತಕಗಳಲ್ಲಿ ಕಂಡುಕೊಳ್ಳಲಾರದ ಅರ್ಥಪೂರ್ಣ ಕಲಿಕೆಯನ್ನು ಒದಗಿಸುತ್ತದೆ” ಎಂದರು.

ನಗರಸಭಾ ಅಧ್ಯಕ್ಷ ವೆಂಕಟಸ್ವಾಮಿ ಮಾತನಾಡಿ, “ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣವು ಪಾಠಪುಸ್ತಕಗಳ ಮೂಲಕ ಮಾತ್ರ ಸೀಮಿತವಾಗಬಾರದು. ಶೈಕ್ಷಣಿಕ ಪ್ರವಾಸವು ಅವರನ್ನು ಹೆಚ್ಚು ಜ್ಞಾನ ಮತ್ತು ಜೀವನದ ಅನುಭವ ನೀಡಲು ಸಹಾಯ ಮಾಡುತ್ತದೆ. ಸರ್ಕಾರದ ಸೌಲಭ್ಯಗಳನ್ನು ಶ್ರೇಷ್ಠವಾಗಿ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ, “ಪ್ರವಾಸಗಳು ಮಕ್ಕಳಲ್ಲಿ ಸಹಬಾಳ್ವೆ, ಸ್ನೇಹ, ಪ್ರೀತಿ, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ” ಎಂದು ಅಭಿಪ್ರಾಯಪಟ್ಟರು.

ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್. ರುದ್ರೇಶಮೂರ್ತಿ, “ಪ್ರವಾಸಗಳು ಪಠ್ಯದಾಚೆಯ ಜ್ಞಾನ ವೃದ್ಧಿಗೆ ಸಹಾಯ ಮಾಡುತ್ತವೆ. ವಿದ್ಯಾರ್ಥಿಗಳು ಸ್ಥಳಗಳ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪರಿಸರದ ಮಹತ್ವವನ್ನು ನೇರವಾಗಿ ಅನುಭವಿಸುತ್ತಾರೆ” ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಯು.ವೈ. ಮಂಜುನಾಥ್, ನಗರಸಭಾ ಸದಸ್ಯರು, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಉಸ್ತುವಾರಿ ಮಾರ್ಗದರ್ಶಿ ಆರ್. ವೆಂಕಟೇಶ್, ಶಿಕ್ಷಕರ ಸಂಘದ ಸರಸ್ವತಮ್ಮ, ಬಿಆರ್‌ಸಿ ಸಮನ್ವಯಾಧಿಕಾರಿ ಲಕ್ಷ್ಮಿನಾರಾಯಣ ಮುಂತಾದವರು ಭಾಗವಹಿಸಿದರು.

ಶಿಡ್ಲಘಟ್ಟ ಪಟ್ಟಣದ ಸರಸ್ವತಿ ಕಾನ್ವೆಂಟ್ ಮುಂಭಾಗದಲ್ಲಿ ನಗರಸಭಾ ಅಧ್ಯಕ್ಷ ವೆಂಕಟಸ್ವಾಮಿ “ಕರ್ನಾಟಕ ದರ್ಶನ” ಶೈಕ್ಷಣಿಕ ಪ್ರವಾಸಕ್ಕೆ ಹಸಿರು ನಿಶಾನೆ ತೋರಿಸಿದರು.

For Daily Updates WhatsApp ‘HI’ to 7406303366

Namma Sidlaghatta WhatsApp Channel

Namma Sidlaghatta Telegram channel

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!