ಈದ್ ಮಿಲಾದ್ ಆಚರಣೆ

0
796
Sidlaghatta Eid Milad Celebration

ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯ ಅನ್ವಯ ಸರಳ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಆಚರಿಸಲು ಮುಸ್ಲಿಮರು ಮುಂದಾಗಿದ್ದಾರೆ.

 ಪ್ರತಿವರ್ಷ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಮರು ತಮ್ಮ ಮನೆಗಳಲ್ಲಿ ಹೋಳಿಗೆ, ಕಡುಬು ಹಾಗೂ ಇತರೆ ಸಿಹಿ ಪದಾರ್ಥ ತಯಾರಿಸಿ ಪರಸ್ಪರ ನೆರೆಹೊರೆಯವರಿಗೆ ಹಂಚುತ್ತಾರೆ. ಪ್ರಮುಖ ಮಸೀದಿ ಹಾಗೂ ದರ್ಗಾಗಳಲ್ಲಿ ದಾನಿಗಳು ಊಟ ಮಾಡಿಸುವುದು ಸಂಪ್ರದಾಯ. ಇಸ್ಲಾಮಿನ ರಬಿವುಲ್ ಅವ್ವಲ್ ತಿಂಗಳಲ್ಲಿ ಈ ಹಬ್ಬ ಬರುವ ಕಾರಣ ಒಂದು ತಿಂಗಳ ಕಾಲ ಮಸೀದಿಗಳಲ್ಲಿ ಮೌಲಿದ್ ಪಾರಾಯಣ (ಮುಹಮ್ಮದ್ ಫೈಗಂಬರ್ ಅವರ ಕೀರ್ತನೆ) ಮಾಡಲಾಗುತ್ತಿದೆ.

ಮಂಗಳವಾರ ತಾಲ್ಲೂಕಿನಾದ್ಯಂತ ಈದ್-ಮಿಲಾದ್ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳನ್ನು ಹಾಗೂ ಹಲವು ಸ್ಥಳಗಳನ್ನು ಅಲಂಕರಿಸಲಾಗಿತ್ತು.

  ಹಬ್ಬದ ನಿಮಿತ್ತ ಮುಸ್ಲಿಂ ಸಮಾಜದಿಂದ ಎಲ್ಲಾ ಬಡಾವಣೆಗಳ ಪ್ರಮುಖ ಮಸೀದಿಗಳಿಂದ ಮುಹಮ್ಮದ್ ಫೈಗಂಬರ್ ಅವರ ಜನ್ಮಸ್ಥಳ ಮೆಕ್ಕಾ ಹಾಗೂ ಇಸ್ಲಾಂ ಪ್ರಚಾರ ಅರಂಭಿಸಿದ ಮದೀನಾ ನಗರಗಳ ಸ್ಥಬ್ದ ಚಿತ್ರದ ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆಯುದ್ದಕ್ಕೂ ಮುಹಮ್ಮದ ಅವರ ಕುರಿತ ನಾತೆ, ಕವ್ವಾಲಿಗಳು ಹಾಡಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಮೇರೆಗೆ ಮೆರವಣಿಗೆ(ಜುಲೂಸ್) ರದ್ದು ಮಾಡಲಾಗಿದೆ.

 ಮನೆಗಳಲ್ಲಿ ಮಹಿಳೆಯರು ಸಿಹಿ ತಿಂಡಿಗಳನ್ನು ತಯಾರಿಸಿ ವಿತರಿಸಿದರು. ಕಿರಿಯರು ಮತ್ತು ಹಿರಿಯರು ಹೊಸ ಉಡುಪುಗಳನ್ನು ತೊಟ್ಟು ಸಂತಸಪಟ್ಟರು. ಕೋವಿಡ್ ಕಾರಣದಿಂದ ಮೆರವಣಿಗೆ ಹಾಗೂ ಸಾಮೂಹಿಕ ಪ್ರಾರ್ಥನೆ ಇರಲಿಲ್ಲವಾದರೂ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಹಾಗೂ ಪರಸ್ಪರ ಶುಭ ಹಾರೈಕೆಗಳು ನಡೆದವು.

 ‘ಪ್ರವಾದಿ ಮುಹಮ್ಮದ್ ಅವರು ಬಡವರ ಹಾಗೂ ಹಸಿವೆ ಹೆಚ್ಚಿನ ಮಹತ್ವ ನೀಡಿದ ಕಾರಣ ಹಬ್ಬದಂದು ಅನ್ನ ಸಂತರ್ಪಣೆ ಮಾಡುವುದು ಸಂಪ್ರದಾಯ. ಉಳ್ಳವರು ಮಸೀದಿಗಳಲ್ಲಿ ಊಟ ಮಾಡಿಸುವುದು ಹಾಗೂ ಬಡವರಿಗೆ ಬಟ್ಟೆ, ನಗದು ದಾನ ಮಾಡುವ ಸಂಪ್ರದಾಯವೂ ಇದೆ. ಅವರ ಅನುಯಾಯಿ ಮುಸ್ಲಿಮರೆಲ್ಲರೂ ಈ ಸಂಪ್ರದಾಯ ಪಾಲನೆ ಮಾಡುತ್ತಾ ಬಂದಿದ್ದಾರೆ’ ಎಂದು ಅಬ್ದುಲ್ ಗಫೂರ್ ತಿಳಿಸಿದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!