Home News ಮತದಾರರ ಪರಿಷ್ಕರಣೆ ಕುರಿತು ಜನ ಜಾಗೃತಿ

ಮತದಾರರ ಪರಿಷ್ಕರಣೆ ಕುರಿತು ಜನ ಜಾಗೃತಿ

0
sidlaghatta Election epic revision

Sidlaghatta : ಶಿಡ್ಲಘಟ್ಟ ನಗರದ ನೆಹರು ಕ್ರೀಡಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು ಹಾಗೂ ತಹಶೀಲ್ದಾರ್ ಬಿ.ಎಸ್.ರಾಜೀವ್ ಬುಧವಾರ ಮತದಾರರ ಪರಿಷ್ಕರಣೆ ಕುರಿತು ಜಾಗೃತಿ ಮತ್ತು ಅರಿವು ಮೂಡಿಸುವ ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ನೀಡಿ ಚಾಲನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಗರದ ನೆಹರು ಕ್ರೀಡಾಂಗಣದಿಂದ ಬೈಕ್ ರ್‍ಯಾಲಿ ಆರಂಭಿಸಿ ನಂತರ ಗ್ರಾಮಾಂತರ ಪ್ರದೇಶದ ಹಂಡಿಗನಾಳ, ಮೇಲೂರು, ಮಳ್ಳೂರು, ಜೆ.ವೆಂಕಟಾಪುರ, ಹೊಸಪೇಟೆ, ಎಚ್.ಕ್ರಾಸ್, ಚೀಮಂಗಲ, ಮಳಮಾಚನಹಳ್ಳಿ, ಭಕ್ತರಹಳ್ಳಿ, ಬೆಳ್ಳೂಟಿ ಮಾರ್ಗವಾಗಿ ಕೇಂದ್ರ ಸ್ಥಾನಕ್ಕೆ ಬರಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ತಹಶೀಲ್ದಾರ್ ಬಿ.ಎಸ್.ರಾಜೀವ್, ನಗರಸಭೆ ಪೌರಾಯುಕ್ತ ಶ್ರೀಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಪೋಲಿಸ್ ಇಲಾಖೆಯವರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version