Sidlaghatta : ಶಿಡ್ಲಘಟ್ಟ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕೆರೆ–ಕುಂಟೆಗಳಲ್ಲಿ ನೀರಿನ ಕೊರತೆ ಇರುವ ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವವನ್ನು ಸರಳ ಹಾಗೂ ಶಿಸ್ತುಬದ್ಧವಾಗಿ ಆಚರಿಸುವಂತೆ ತಾಲ್ಲೂಕು ಆಡಳಿತ ಸೂಚಿಸಿದೆ.
In English: With Sidlaghatta taluk officially declared drought-hit and most lakes and ponds running low, the taluk administration has asked Ganeshotsava committees to keep this year’s celebrations simple, and to immerse idols only at designated water-available sites rather than wherever they choose.
ಗಣೇಶೋತ್ಸವದ ಪೂರ್ವಭಾವಿ ಸಿದ್ಧತೆ ಹಾಗೂ ಶಾಂತಿ–ಸುವ್ಯವಸ್ಥೆ ಕುರಿತು ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಗಗನಸಿಂಧು ಹಾಗೂ ಸಿಪಿಐ ಆನಂದ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳ ಸಭೆ ನಡೆಯಿತು.
ತಾಲ್ಲೂಕಿನ ಬಹುತೇಕ ಕೆರೆ, ಕುಂಟೆಗಳಲ್ಲಿ ನೀರಿನ ಕೊರತೆ ಇರುವುದರಿಂದ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಮಸ್ಯೆಯಾಗುವ ಸಾಧ್ಯತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪಂಚಾಯಿತಿ ಮಟ್ಟದಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ ಆಡಳಿತ ನಿಗದಿಪಡಿಸುವ, ನೀರಿನ ಲಭ್ಯತೆ ಇರುವ ಸ್ಥಳಗಳಲ್ಲಿಯೇ ಮೂರ್ತಿಗಳ ವಿಸರ್ಜನೆ ಮಾಡಬೇಕು. ಎಲ್ಲೆಂದರಲ್ಲಿ ವಿಸರ್ಜನೆಗೆ ಅವಕಾಶ ನೀಡುವುದಿಲ್ಲ ಎಂದು ತಹಶೀಲ್ದಾರ್ ಗಗನಸಿಂಧು ತಿಳಿಸಿದರು.

