
Goramillahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಗೊರಮಿಲ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಹನುಮಕ್ಕ ಮತ್ತು ಉಪಾಧ್ಯಕ್ಷರಾಗಿ ಗಂಗರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಒಬ್ಬೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧ ಆಯ್ಕೆ ಸುಗಮವಾಗಿ ನಡೆಯಿತು. ಚುನಾವಣಾಧಿಕಾರಿ ಎಂ ಮಂಜುನಾಥ್ ಇಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಜಿ.ಎನ್,ಶಿವಣ್ಣ, ಬಿ ದಾಸಪ್ಪ,ಗಂಗರತ್ನಮ್ಮ, ಚಿಕ್ಕನರಸಪ್ಪ, ವೆಂಕಟರಾಯಪ್ಪ, ದಾಸಪ್ಪ,ರತ್ನಮ್ಮ, ಅಂಗಡಿ ದಾಸಪ್ಪ,ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಎನ್. ವೆಂಕಟೇಶ್ ಹಾಜರಿದ್ದರು.