Home News ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಅಭಿಯಾನ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಅಭಿಯಾನ

0
Sidlaghatta Government first Grade College Cleaning

 ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ( Government First Grade College) ನಲ್ಲಿ ಸ್ವಚ್ಛತೆಗೆ ಗ್ರಹಣ ಬಡಿದಿದೆಯೆಂದು ಇತ್ತೀಚಿಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಾಯುಕ್ತ ಆರ್.ಶ್ರೀಕಾಂತ್ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಜೊತೆಗೂಡಿ ಸ್ವಚ್ಛತಾ ಅಭಿಯಾನ ನಡೆಸಿ ಇಡೀ ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.

 ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‍ಮೂರ್ತಿ, ಪ್ರಾಂಶುಪಾಲ ನರಸಿಂಹಮೂರ್ತಿ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಹಕಾರ ನೀಡಿದ್ದರಿಂದ ಕಾಲೇಜಿನ ಆವರಣದಲ್ಲಿ ವ್ಯಾಪಕವಾಗಿ ಬೆಳೆದಿದ್ದ ಗಿಡಗಂಟೆಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಪೌರಾಯುಕ್ತ ಶ್ರೀಕಾಂತ್ ತಿಳಿಸಿದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version