Home News ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗಬೇಕು – ಶಾಸಕ ಬಿ.ಎನ್.ರವಿಕುಮಾರ್

ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗಬೇಕು – ಶಾಸಕ ಬಿ.ಎನ್.ರವಿಕುಮಾರ್

0

Sidlaghatta : ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಾರ್ವಜನಿಕರಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸ ಆಗಬೇಕು. ಚಿಕಿತ್ಸೆಯೂ ಉತ್ತಮವಾಗಿರಬೇಕೆಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ “ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಮಾತನಾಡಿದರು.

ತಾಲ್ಲೂಕಿನಲ್ಲಿ 129 ಮಂದಿ ಡಯಾಲಿಸೀಸ್ ರೋಗಿಗಳಿದ್ದು ಅವರು ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿ ತಮಗೆ ಅನುಕೂಲ ಇರುವ ಕಡೆ ವಾರಕ್ಕೆ ಮೂರು ದಿನಗಳ ಕಾಲ ಡಯಾಲಿಸೀಸ್ ಮಾಡಿಸಿಕೊಳ್ಳುತ್ತಿದ್ದು ಬಹಳ ತಾಪತ್ರಯಗಳನ್ನು ಎದುರಿಸುತ್ತಿದ್ದಾರೆ.

ಹಾಗಾಗಿ ಶಿಡ್ಲಘಟ್ಟದಲ್ಲಿ 8 ಹಾಸಿಗೆಗಳ ಡಯಾಲಿಸೀಸ್ ಕೇಂದ್ರ ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ ಶಾಸಕರು ಈ ಬಗ್ಗೆ ಸರ್ಕಾರದಿಂದ ಮಾತ್ರವಲ್ಲದೆ ನಾನು ವೈಯಕ್ತಿಕವಾಗಿಯೂ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದರು.

ತಾಲ್ಲೂಕಿನ ಸಾದಲಿ, ಬಶೆಟ್ಟಹಳ್ಳಿಯಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ, ಶಿಡ್ಲಘಟ್ಟ ನಗರದಲ್ಲಿ ಲ್ಯಾಬ್ ಕಟ್ಟಡ, ವಸತಿ ಗೃಹ ಕಟ್ಟಡ ನಿರ್ಮಾಣವಾಗುತ್ತಿದ್ದು ಕಾಮಗಾರಿ ಗುಣಮಟ್ಟದ ಬಗ್ಗೆ ದೂರುಗಳಿವೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ಇಲ್ಲವಾಗಿದೆ ಎಂದು ಆಕ್ಷೇಪಿಸಿದ ಶಾಸಕರು ಸಂಬಂಧಿಸಿದ ಗುತ್ತಿಗೆದಾರರನ್ನ ಕರೆಸಿ ಸಭೆ ನಡೆಸಲು ತಿಳಿಸಿದರು.

ಜತೆಗೆ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆರಿಗೆ ಪ್ರಕರಣಗಳು ಕಡಿಮೆ ಅಗುತ್ತಿವೆ. ಮುದ್ದೇನಹಳ್ಳಿಯ ಶ್ರೀಸತ್ಯಸಾಯಿ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹೆರಿಗೆಗೆ ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಇದೆ.

ಇಲ್ಲಿ ಕೆಲವರು ತಮ್ಮ ಊರಿಗೆ ಬಸ್ ಸಿಗದೇ ಇದ್ದಾಗ ಆರೋಗ್ಯ ಸರಿಯಿಲ್ಲ ಎಂದು ಸುಳ್ಳು ಹೇಳಿ ಆಸ್ಪತ್ರೆಯಲ್ಲೇ ಮಲಗಿಕೊಳ್ಳುತ್ತಾರೆ ಮತ್ತು ಮೊಬೈಲ್ ಕಳ್ಳತನ ಮಾಡುವಂತಹ ಘಟನೆಗಳು, ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ ಎಂದು ಆರೋಪಿಸಿ ಸುಖಾ ಸುಮ್ಮನೆ ಗಲಾಟೆ ಮಾಡಿ ಇಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ ಎಂದು ವೈದ್ಯೆ ಡಾ.ವಾಣಿ ಹಾಗೂ ಇತರರು ಸಭೆಯಲ್ಲಿ ಹೇಳಿಕೊಂಡರು.

ಇದಕ್ಕೆ ಸ್ಪಂದಿಸಿದ ಶಾಸಕರು, ಶಿಡ್ಲಘಟ್ಟ ನಗರಠಾಣೆಯ ಎಸ್‌.ಐ ವೇಣುಗೋಪಾಲ್ ಅವರಿಗೆ ಈ ಸಂಬಂಧ ಕೂಡಲೆ ರಾತ್ರಿ ಪಾಳಯದಲ್ಲಿ ಒಬ್ಬರು ಪೇದೆಯನ್ನು ಖಾಯಂ ಆಗಿ ನೇಮಿಸುವಂತೆ ಸೂಚಿಸಿದ ಹಿನ್ನಲೆ, ಇಂದಿನಿಂದಲೆ ಪೇದೆಯೊಬ್ಬರನ್ನು ನೇಮಿಸುವುದಾಗಿ ಎಸ್‌ಐ ಅವರು ಸಭೆಗೆ ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಪ್ರಯೋಗಾಲಯದಲ್ಲಿ ಕೇಂದ್ರ ಸರ್ಕಾರದ ನಿಯಮಗಳಡಿ ಎಲ್ಲ ರೀತಿಯ ರಕ್ತ ಪರೀಕ್ಷೆಯನ್ನು ಇಲ್ಲೇ ನಡೆಸಬಹುದಿದ್ದು ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ನೆರವು ಸಿಗಲಿದೆ. ಹಾಗಾಗಿ ಆಗಷ್ಟ್ 15 ರೊಳಗೆ ಕಾಮಗಾರಿ ಮುಗಿಸಲು ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಯ ಕೊರತೆ, ಕಾಂಪೌಂಡ್ ನಿರ್ಮಾಣ, ಪಾರ್ಕ್ ನಿರ್ಮಾಣ, ಐಸಿಯು ಘಟಕ ನಿರ್ಮಾಣ ಸೇರಿ ಹತ್ತು ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಪ್ರಗತಿ ಪರಿಶೀಲನೆಗೂ ಮುನ್ನ ಆಸ್ಪತ್ರೆಯ ಎಲ್ಲ ವಿಭಾಗಗಳಿಗೂ ಭೇಟಿ ಕೊಟ್ಟು ಪರಿಶೀಲಿಸಿದರು. ಸಿಟಿ ಸ್ಕ್ಯಾನಿಂಗ್‌ ಗಾಗಿ ಜಿಲ್ಲಾ ಕೇಂದ್ರಕ್ಕೆ ಹೋಗಬೇಕಾಗಿರುವುದನ್ನು ತಪ್ಪಿಸಲು ಇಲ್ಲಿಯೆ ಸಿಟಿ ಸ್ಕ್ಯಾನಿಂಗ್ ಕೇಂದ್ರ ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಆಡಳಿತ ವೈದ್ಯಾಧಿಕಾರಿ ಡಾ.ಮನೋಹರ್, ಸರಕಾರಿ ನೌಕರರ ಸಂಘದ ಕೆ.ಎನ್.ಸುಬ್ಬಾರೆಡ್ಡಿ, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು, ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

Namma Sidlaghatta WhatsApp Channel

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version