Home News ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು

ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು

0
Sidlaghatta Government Hospital Tobacco Awareness Program Inauguration Taluk Health Officer Dr. Venakateshmurthy

ಶಿಡ್ಲಘಟ್ಟ ​ಸಾರ್ವಜನಿಕ ಆಸ್ಪತ್ರೆಯ ಬಳಿ ಸೋಮವಾರ ತಾಲ್ಲೂಕಿನಾದ್ಯಂತ ಸಂಚರಿಸುತ್ತಾ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡುವ ವಾಹನಕ್ಕೆ ಚಾಲನೆ ನೀಡಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿದರು.

ಕೆಡುಕಿಗೆ ಆಕರ್ಷಣೆ ಹೆಚ್ಚು. ಬೀಡಿ, ಸಿಗರೇಟು ಸೇರಿದಂತೆ ತಂಬಾಕನ್ನು ಬೇರೆ ಬೇರೆ ರೂಪಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ, ಇದು ಕೇವಲ ಜೀವನ ನಷ್ಟವಷ್ಟೇ ಆಲ್ಲ; ಆರ್ಥಿಕ ನಷ್ಟವನ್ನೂ ತರುತ್ತದೆ. ತಂಬಾಕು ಸೇವೆನೆಯಿಂದ ಕೇವಲ ಗಂಟಲು, ಶ್ವಾಸಕೋಶ ಮಾತ್ರವಲ್ಲದೆ ಅಡಿಯಿಂದ ಮುಡಿವರೆಗೆ ನಮ್ಮ ದೇಹದ ಪ್ರತಿಯೊಂದು ಜೀವ ಕೋಶದ ಮೇಲೆ ಅದು ಮಾರಕ ಪರಿಣಾಮವನ್ನುಂಟು ಮಾಡುತ್ತದೆ. ಚಟಕ್ಕೆ ಜೋತು ಬಿದ್ದು ಬಹುಬೇಗ ಸಾವು ತಂದುಕೊಳ್ಳುವವರು ತಮ್ಮ ಕುಟುಂಬಗಳನ್ನು ಅನಾಥರನ್ನಾಗಿಸಿರುತ್ತಾರೆ ಹಾಗೂ ಚಿಕಿತ್ಸೆಗೆ ಸಾವಿರಾರು ರೂ. ವ್ಯಯ ಮಾಡುವುದರ ಮೂಲಕ ತಮ್ಮ ಕುಟುಂಬಗಳನ್ನು ಚೇತರಿಸಿಕೊಳ್ಳಲಾರದ ಆರ್ಥಿಕ ಸಂಕಷ್ಟಕ್ಕೆ ದೂಡಿರುತ್ತಾರೆ ಎಂದು ಅವರು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಉಪಾಧ್ಯಕ್ಷ ವಸಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ನಾರಾಯಣಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮಹೇಶ್, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಾಣಿ, ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ.ಮನೋಹರ್. ಆಯುಷ್ ವೈದ್ಯ ಡಾ.ವಿಜಯಕುಮಾರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಂಯೋಜಕ ರಾಘವೇಂದ್ರ, ಜಿಲ್ಲಾ ಮಲೇರಿಯಾ ನಿರೀಕ್ಷಣ ಅಧಿಕಾರಿ ಶಶಿಕುಮಾರ್, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಸಾರ್ವಜನಿಕ ಆಸ್ಪತ್ರೆಯ ಅಕ್ಕಲರೆಡ್ಡಿ, ಮುನಿರತ್ನಮ್ಮ, ಅನಂತ್ ಕುಮಾರ್, ನಂದಿನಿ, ತಾಲ್ಲೂಕು ಆಶಾ ಮೇಲ್ವಿಚಾರಕಿ ಗೀತಾ, ಆರೋಗ್ಯ ನಿರೀಕ್ಷಣಾಧಿಕಾರಿ ಲೋಕೇಶ್, ಸುನಿಲ್, ಧನಂಜಯ, ವಿಜಿಯಮ್ಮ, ಅಫ್ರೋಜ್, ಕೀರ್ತಿ, ಚೈತ್ರ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version