
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿರುವ ಆತಂಕಕಾರಿ ಘಟನೆ ನಡೆದಿದೆ. ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದೊಯ್ದಿದ್ದ ವೇಳೆ ಬಾಲಕಿ 3 ತಿಂಗಳ ಗರ್ಭಿಣಿ ಆಗಿರುವುದು ತಿಳಿದು ಬಂದಿದೆ.
ಸರ್ಕಾರಿ ವಸತಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಬೇಸಿಗೆ ರಜೆ ಇರುವಾಗ ತನ್ನೂರಿಗೆ ಹೋಗಿದ್ದಾಗ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಅದೇ ಊರಿನ ಚಂದ್ರು ಎಂಬಾತ ಈ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಈ ವಿಷಯ ಮನೆಯವರಿಗೆ ಅಥವಾ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಆಗಾಗ ಮೂರು ನಾಲ್ಕು ಬಾರಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಬಾಲಕಿಯ ತಂದೆ ತಾಯಿ ಕುರಿ ಮೇಯಿಸಲೆಂದು ಬಯಲಿಗೆ ಹೋಗಿದ್ದಾಗ ಚಂದ್ರು ಈ ಕುಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ.
ಬೇಸಿಗೆ ಮುಗಿದು ಮತ್ತೆ ವಸತಿ ಶಾಲೆಗೆ ಬಂದಾಗ ಅಲ್ಲಿ ಬಾಲಕಿಯು ಆರೋಗ್ಯ ತಪಾಸಣೆ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಗೆ 3 ತಿಂಗಳಿಂದಲೂ ಫಿರಿಯಡ್ಸ್ ಆಗಿಲ್ಲ ಎಂದು ತಿಳಿಸಿದ್ದು ಆಗ ಪೋಷಕರೊಂದಿಗೆ ಆಸ್ಪತ್ರೆಗೆ ಕರದೊಯ್ದು ತಪಾಸಣೆ ನಡೆಸಿದಾಗ ಆಕೆ 3 ತಿಂಗಳ ಗರ್ಭಿಣಿ ಆಗಿರುವುದಾಗಿ ವೈದ್ಯರು ದೃಢಪಡಿಸಿದ್ಧಾರೆ. ದಿಬ್ಬೂರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಬಾಲಕಿಯನ್ನು ಬಾಲಕಿಯರ ವಸತಿ ನಿಲಯಕ್ಕೆ ದಾಖಲಿಸಲಾಗಿದೆ.