Sidlaghatta : ಸರ್ಕಾರಿ ಶಾಲೆಯ ವಿದ್ಯಾರ್ಥಿನಿ, ಅಪ್ರಾಪ್ತ ಬಾಲಕಿಯ ಮೇಲೆ ಶಾಲಾ ಮುಖ್ಯ ಶಿಕ್ಷಕನೇ ಅತ್ಯಾಚಾರ ಮಾಡಿ ಬಾಲಕಿಯನ್ನು ಗರ್ಭಿಣಿ ಮಾಡಿದ ಆಘಾತಕಾರಿ ಘಟನೆ ನಡೆದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ನನ್ನು ಈ ಸಂಬಂಧ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇತ್ತೀಚೆಗೆ 13 ವರ್ಷದ ಅಪ್ರಾಪ್ತ ಬಾಲಕಿಯ ಆರೋಗ್ಯದಲ್ಲಿ ಏರು ಪೇರಾಗಿದ್ದು ತಪಾಸಣೆಗಾಗಿ ಆಸ್ಪತ್ರೆಗೆ ಹೆತ್ತವರು ಕರೆದೊಯ್ದಾಗ ಬಾಲಕಿಯು ಗರ್ಭಿಣಿ ಆಗಿರುವ ಅಂಶ ದೃಢಪಟ್ಟಿದ್ದು ಹೆತ್ತವರು ಹೌಹಾರಿದ್ದಾರೆ. ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆಯ ಬಗ್ಗೆ ಬಾಯಿ ಬಿಟ್ಟಿದ್ದಾಳೆ.
ಸಂತ್ರಸ್ತೆ ಬಾಲಕಿಯೆ ನೀಡಿದ ದೂರಿನ ಮೇರೆಗೆ ಪೊಲೀಸರು ಫೋಕ್ಸೋ ಕಾಯಿದೆಯಡಿ ಕೇಸು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದು ಘಟನೆಗೆ ಕಾರಣರಾದ ಮುಖ್ಯ ಶಿಕ್ಷಕನನ್ನು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
For Daily Updates WhatsApp ‘HI’ to 7406303366









