Handiganala, Sidlaghatta : ಕಲಿಕೆಯ ಜೊತೆಗೆ ಸಮಾಜ ಸೇವೆಯ ಪರಿಕಲ್ಪನೆಯೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನ ಉಂಟಾಗುವಂತೆ ಮಾಡುವುದು ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್) ಯ ಪ್ರಮುಖ ಉದ್ದೇಶವಾಗಿದೆ ಎಂದು ಪದವಿ ಪೂರ್ವ ಕಾಲೇಜು ಜಿಲ್ಲಾ ಉಪನಿರ್ದೇಶಕ ಎಂ.ಮರಿಸ್ವಾಮಿ ಹೇಳಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಪುರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಡ್ಲಘಟ್ಟ ಸರ್ಕಾರಿ ಪಿಯು ಕಾಲೇಜಿನ ಎನ್.ಎಸ್.ಎಸ್ ಘಟಕದ 7 ನೇ ದಿನದ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಂದ, ವಿದ್ಯಾರ್ಥಿಗಳಿಗಾಗಿ, ವಿದ್ಯಾರ್ಥಿಗಳೇ ಆಯೋಜಿಸುವ ಎನ್.ಎಸ್.ಎಸ್ ಶಿಭಿರಗಳಲ್ಲಿ ವಿದ್ಯಾರ್ಥಿಗಳು ಸಮುದಾಯದ ಜನರೊಂದಿಗೆ ಬೆರೆತು ಅವರ ನೋವು, ನಲಿವು, ಸುಖ, ದುಃಖ ಗಳಲ್ಲಿ ಪಾಲ್ಗೊಳ್ಳುವುದಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗು ರಾಷ್ಟ್ರ ಭಕ್ತಿ ಮೂಡಿಸುವ ಜೊತೆಗೆ ಸಹಬಾಳ್ವೆ, ಸಹೋದರತ್ವವನ್ನು ಸಾಕಾರಗೊಳಿಸಲು ಶಿಬಿರಗಳು ಸಹಕಾರಿಯಾಗಿವೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಜಗದೀಶ್ ಹಾಗು ಸಿಡಿಪಿಓ ನೌತಾಜ್ ಮಾತನಾಡಿ ತಮ್ಮ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಸಾದಲಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಆರ್.ಮುನಿರಾಜು, ಶಿಬಿರದ ನಿರ್ದೇಶಕ ಸಿ.ವೆಂಕಟಶಿವಾರೆಡ್ಡಿ, ಶಿಬಿರದ ಶಿಬಿರಾಧಿಕಾರಿ ಎಚ್.ಸಿ.ಮುನಿರಾಜು, ಉಪನ್ಯಾಸಕ ಶಿವಾರೆಡ್ಡಿ, ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ನಾರಾಯಣಸ್ವಾಮಿ ಹಾಗು ವಿದ್ಯಾರ್ಥಿಗಳು ಹಾಜರಿದ್ದರು.