Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಕಾನೂನು ಅರಿವು ಹಾಗೂ ನೆರವು ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ತಾ.ಕಾ.ಸೇ.ಸ. ಶಿಡ್ಲಘಟ್ಟ ಅಧ್ಯಕ್ಷ ಶ್ರೀ ಮೊಹಮ್ಮದ್ ರೋಷನ್ ಷಾ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾನಸಿಕ ಆರೋಗ್ಯದ ಮಹತ್ವ, ಮಾನಸಿಕ ಅಸ್ವಸ್ಥತೆಗಳ ಕುರಿತು ಜನಜಾಗೃತಿ ಹಾಗೂ ಕಾನೂನು ಸಹಾಯದ ಅಗತ್ಯತೆ ಕುರಿತಂತೆ ಉಪನ್ಯಾಸಗಳು ನಡೆದವು. ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ವೈದ್ಯರು ಹಲವು ಸಲಹೆಗಳನ್ನು ನೀಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರಂಜಿತಾ ಎಸ್, ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮೂರ್ತಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮನೋಹರ್, ಸಹಾಯಕ ಸರ್ಕಾರಿ ಅಭಿಯೋಜಕ ಮೊಹಮ್ಮದ್ ಖಾಜಾ, ಜಿಲ್ಲಾ ಮನೋವೈದ್ಯ ಡಾ. ಹೇಮಂತ್ ಕುಮಾರ್ ಸಿ, ಪ್ಯಾನೆಲ್ ವಕೀಲರು ಶ್ರೀಮತಿ ವೀಣಾ, ಚಂದ್ರಶೇಖರ್ ಮತ್ತು ತಾಸಿಂ ತಾಜ್, ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎಸ್. ದೇವರಾಜ್, ನಗರ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366




 
                                    




