Home News ಶಿಡ್ಲಘಟ್ಟ ಸರ್ಕಾರಿ ಪಿಯು ಕಾಲೇಜಿನಲ್ಲಿ ಫ್ರೆಷರ್ಸ್ ಡೇ

ಶಿಡ್ಲಘಟ್ಟ ಸರ್ಕಾರಿ ಪಿಯು ಕಾಲೇಜಿನಲ್ಲಿ ಫ್ರೆಷರ್ಸ್ ಡೇ

0

Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಫ್ರೆಷರ್ಸ್ ಡೇ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆತು, ಕಾಲೇಜು ಆವರಣವೇ ಹಬ್ಬದ ವಾತಾವರಣ ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಪಿಯು ಉಪ ನಿರ್ದೇಶಕ ಆದಿಶೇಷರಾವ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿ ಮಾತನಾಡಿದರು. “ಪುಸ್ತಕವೇ ನಿಜವಾದ ಸ್ನೇಹಿತ. ಜ್ಞಾನ, ಸಂಸ್ಕೃತಿ, ಭಾವನೆಗಳನ್ನೆಲ್ಲ ಪುಸ್ತಕದಿಂದಲೇ ಪಡೆಯಬಹುದು. ಆದರೆ ಇಂದಿನ ವಿದ್ಯಾರ್ಥಿಗಳು ಮೊಬೈಲ್‌ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ನಿಜವಾದ ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ವೆಂಕಟಶಿವರೆಡ್ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾ, “ಗುರಿ ನಿಗದಿಪಡಿಸಿಕೊಂಡು ಅದನ್ನು ಸಾಧಿಸಲು ನಿರಂತರ ಪರಿಶ್ರಮ ಅಗತ್ಯ. ಓದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಮೊಬೈಲ್ ಅನ್ನು ಪಾಸಿಟಿವ್ ರೀತಿಯಲ್ಲಿ ಉಪಯೋಗಿಸಬೇಕು. ಪ್ರತಿದಿನ ಕನಿಷ್ಠ ಆರು ಗಂಟೆ ಓದಿದರೆ ಉತ್ತಮ ಫಲಿತಾಂಶವನ್ನು ಸಾಧಿಸಬಹುದು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ 2024–25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿನಿಯರಿಗೆ ಸನ್ಮಾನ ಸಲ್ಲಿಸಲಾಯಿತು. ಜೊತೆಗೆ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ಫ್ರೆಷರ್ಸ್ ಡೇ ಅಂಗವಾಗಿ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಹಾಡು, ಕಾವ್ಯ ಪಠಣ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಿರಿಯರು ಹಾಗೂ ಹೊಸ ವಿದ್ಯಾರ್ಥಿಗಳು ಪರಸ್ಪರ ಪರಿಚಯ ಮಾಡಿಕೊಂಡು ಸ್ನೇಹದ ಬಾಂಧವ್ಯ ಬೆಳೆಸಿಕೊಂಡರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಎಚ್.ಸಿ. ಮುನಿರಾಜು, ಹಿರಿಯ ಉಪನ್ಯಾಸಕ ಡಿ.ಲಕ್ಷ್ಮಯ್ಯ, ಉಪನ್ಯಾಸಕರಾದ ಶ್ರೀ ಕೃಷ್ಣ ಪರಮಾತ್ಮ, ನರಸಿಂಹರೆಡ್ಡಿ, ಬಾಬಾಜನ್, ಧನುಷ್ ರೆಡ್ಡಿ, ನಾಗಾರ್ಜುನ, ಶ್ರೀಧರ್, ವೈಷ್ಣವಿ, ನಯಿದಾ ಬೇಗಂ, ಶಾಂತ, ನಾಗವೇಣಿ, ನವೀನ್, ರಾಜೇಶ್, ಚಂದ್ರಶೇಖರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

Namma Sidlaghatta WhatsApp Channel

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version