Home News ತಾಲ್ಲೂಕು ಮಟ್ಟದ ಆರೋಗ್ಯ ಮೇಳ, ರಕ್ತದಾನ ಶಿಬಿರ

ತಾಲ್ಲೂಕು ಮಟ್ಟದ ಆರೋಗ್ಯ ಮೇಳ, ರಕ್ತದಾನ ಶಿಬಿರ

0
Sidlaghatta Health Camp Blood Donation Camp

ಶಿಡ್ಲಘಟ್ಟ ತಾಲ್ಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ತಾಲ್ಲೂಕು ಮಟ್ಟದ ಆರೋಗ್ಯ ಮೇಳ, ರಕ್ತದಾನ ಶಿಬಿರ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ಸೋಮವಾರ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಸಂಸದ ಮುನಿಸ್ವಾಮಿ ಉದ್ಘಾಟಿಸಿದರು. ವಿವಿಧ ಇಲಾಖೆಗಳ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಡ್ಲಘಟ್ಟ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಕಾರ್ಯದರ್ಶಿ ಸಿ. ಬಿ. ಪ್ರಕಾಶ್ ರವರ ನೇತೃತ್ವದಲ್ಲಿ ಸ್ಕೌಟ್ಸ್ ,ಗೈಡ್ಸ್ ಮತ್ತು ರೋವರ್ಸ್ ಗಳು ಆರೋಗ್ಯ ಮೇಳದಲ್ಲಿ ಸೇವೆಯನ್ನು ಸಲ್ಲಿಸಿದರು. ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಉಚಿತವಾಗಿ ಕೆಲವು ಔಷಧಿಗಳನ್ನು ನೀಡಲಾಯಿತು.

ಶಾಸಕ ವಿ. ಮುನಿಯಪ್ಪ, ಜಿಲ್ಲಾ ಆರೋಗ್ಯಧಿಕಾರಿ ಡಾ.ಇಂದಿರಾ ಕಂಬಾಡಿಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಸುಬ್ಬಾರಡ್ಢಿ, ನಗರಸಭೆ ಆಯುಕ್ತ ಶ್ರೀಕಾಂತ್, ಇಒ ಚಂದ್ರಕಾಂತ್, ಮಾಜಿ ಶಾಸಕ ರಾಜಣ್ಣ, ನಗರ ಸಭೆ ಅಧ್ಯಕ್ಷೆ ಸುಮಿತ್ರ ರಮೇಶ್, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ಸಿ.ನಂದೀಶ್, ಸಿಡಿಪಿಒ ನವತಾಜ್, ಸುರೇಂದ್ರಗೌಡ, ರಾಘವೇಂದ್ರ, ನಾರಾಯಣಸ್ವಾಮಿ, ಎಲ್.ಅನಿಲ್ ಕುಮಾರ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version