29.2 C
Sidlaghatta
Saturday, June 15, 2024

ಪ್ರೌಢಶಾಲಾ ಸಹಶಿಕ್ಷಕರ ಸಂಘ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ (High School Teachers Association) ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಜಿಲ್ಲಾ ಬಿಸಿಯೂಟ ಯೋಜನೆ ಅಕ್ಷರದಾಸೋಹ ಶಿಕ್ಷಣಾಧಿಕಾರಿ ಆಂಜನೇಯ ಅವರು ಮಾತನಾಡಿದರು.

ವೃತ್ತಿಸಂಬಂಧಿತ ಕಾರ್ಯಾಗಾರಗಳು ನಡೆದು ಉತ್ತಮ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಕಾಯ್ದುಕೊಳ್ಳಲು ಶಿಕ್ಷಕರು ಶ್ರಮಿಸಬೇಕು. ಮಕ್ಕಳ ಉತ್ತಮ ಕಲಿಕೆಗೆ ಪೂರಕವಾದ ಯೋಜನೆಗಳನ್ನು, ಬೋಧನೆಯಲ್ಲಿ ಇನ್ನೋವೇಟೆಡ್ ವಿಧಾನಗಳನ್ನು ಬಳಸಿಕೊಳ್ಳಲು ಸದಾ ಶಿಕ್ಷಕರು ಹವಣಿಸುತ್ತಿರಬೇಕು. ಶಿಕ್ಷಕರು ತಮ್ಮ ವೃತ್ತಿಜೀವನದಲ್ಲಿ ತಮ್ಮ ಬೋಧನಾ ಕೌಶಲವನ್ನು ಅಭಿವೃದ್ಧಿಪಡಿಸಿಕೊಂಡು ಶೈಕ್ಷಣಿಕ ಔನತ್ಯವನ್ನು ಸಾಧಿಸಲು ಪೂರಕವಾದ ಕಾರ್ಯಕ್ರಮಗಳು ಅಗತ್ಯವಿದೆ ಎಂದರು.

ಜಿಲ್ಲಾ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಭಾರಿ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ ಮಾತನಾಡಿ, ವಿಷಯ ಬೋಧಕರ ವೇದಿಕೆಗಳನ್ನು ಬಲಪಡಿಸಬೇಕು. ಆಗಿಂದಾಗ್ಗೆ ಶಿಕ್ಷಕರು ಒಟ್ಟಿಗೆ ಸೇರಿ ಕ್ಲಿಷ್ಟಾಂಶಗಳು, ಹೊಸಹೊಸ ಬೋಧನಾ ವಿಧಾನಗಳ ಬಗ್ಗೆ ಸಮಾಲೋಚಿಸಬೇಕು. ಶೈಕ್ಷಣಿಕ ಸಮ್ಮೇಳನಗಳಲ್ಲಿ ಮುಖ್ಯಶಿಕ್ಷಕರಿಗೆ, ಸಹಶಿಕ್ಷಕರಿಗೆ ಬೋಧನೆಯಲ್ಲಿ ಆನ್‌ಲೈನ್ ಬಳಕೆ, ಆನ್‌ಲೈನ್ ಹಣ ವ್ಯವಹಾರ, ಮತ್ತಿತರ ವಿಶೇಷ ವಿಷಯಗಳಲ್ಲಿ ಕಾರ್ಯಾಗಾರ ನಡೆಸಿ ತರಬೇತುಗೊಳಿಸಬೇಕು. ಶಿಕ್ಷಕರನ್ನು ಬೋಧನಾ ಒತ್ತಡದಿಂದ ವಿಮುಕ್ತಗೊಳಿಸಲು ಪೂರಕವಾಗಿ ಯೋಗ, ಧ್ಯಾನ, ಆರೋಗ್ಯ ಮತ್ತು ಕೌಶಲಾಭಿವೃದ್ಧಿ ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳಲು ಸಹಕರಿಸಬೇಕು ಎಂದರು.

ಶಿಡ್ಲಘಟ್ಟ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳೂ ಮಾತೃಸಂಘದೊಂದಿಗೆ ಸಹಕರಿಸಿದಾಗ ನೌಕರರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಶಿಡ್ಲಘಟ್ಟ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪ್ರಧಾನಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ತಾಲ್ಲೂಕಿನ ಪ್ರೌಢಶಾಲೆಗಳಲ್ಲಿನ ಎಲ್ಲಾ ಶಿಕ್ಷಕರು, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-2 ಶಿಕ್ಷಕರ ಯಾವುದೇ ಸಮಸ್ಯೆಗಳಿಲ್ಲದಂತೆ ನೋಡಿಕೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಸಂಘಟನಾತ್ಮಕವಾದ ಶೈಕ್ಷಣಿಕ ಚಟುವಟಿಕೆಗಳಿಗೆ ನಾಂದಿ ಹಾಡಲಾಗಿದೆ ಎಂದರು.

ಶಿಡ್ಲಘಟ್ಟ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವೆಂಕಟರೆಡ್ಡಿ ಮಾತನಾಡಿ, ಪ್ರತಿ ತಿಂಗಳೂ ಮಾಸಿಕ ವೇತನ ಸ್ಲಿಪ್‌ಗಳನ್ನು ಶಿಕ್ಷಕರಿಗೆ ತಲುಪಿಸುವುದು. ದೈಹಿಕಶಿಕ್ಷಣ, ವೃತ್ತಿಶಿಕ್ಷಕರ ಸಹಶಿಕ್ಷಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲಾಗುವುದು ಎಂದರು.

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಎಲ್.ವೆಂಕಟರೆಡ್ಡಿ, ಪ್ರಧಾನಕಾರ್ಯದರ್ಶಿಯಾಗಿ ಎಚ್.ಎಸ್.ರುದ್ರೇಶಮೂರ್ತಿ, ಉಪಾಧ್ಯಕ್ಷರಾಗಿ ಎಂ.ಕೆ.ಸಿದ್ಧರಾಜು, ಖಜಾಂಚಿಯಾಗಿ ಹೇಮಾವತಿ, ಸಹಕಾರ್ಯದರ್ಶಿಯಾಗಿ ಎಂ.ಶಿವಕುಮಾರ್, ರಾಜ್ಯಪರಿಷತ್ ಸದಸ್ಯರಾಗಿ ಗೋಪಾಲಕೃಷ್ಣ, ಅಧಿಕಾರ ಸ್ವೀಕರಿಸಿದರು. ನಾಮನಿರ್ದೇಶನಗೊಂಡ ನಿರ್ದೇಶಕರನ್ನು ಪ್ರಮಾಣಪತ್ರ ವಿತರಿಸಿ ಗೌರವಿಸಲಾಯಿತು.

ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಟಿ.ಶಶಿಧರ್, ಖಜಾಂಚಿ ಗೋಪಾಲಕೃಷ್ಣ, ಮಾಜಿ ಅಧ್ಯಕ್ಷ ಎಂ.ಕೆಂಪಣ್ಣ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಬೈರಾರೆಡ್ಡಿ, ಚಿಕ್ಕಬಳ್ಳಾಪುರ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷ ಲಕ್ಷ್ಮಣರೆಡ್ಡಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!