Home News ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು, ಒಬ್ಬ ಮೃತ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು, ಒಬ್ಬ ಮೃತ

0
Sidlaghatta Hosahalli Accident

Hosahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಶುಕ್ರವಾರ ರಾತ್ರಿ ಬೆಂಗಳೂರು ಕಡೆಯಿಂದ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಕಾಲುವೆಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೆ ಒಬ್ಬರು ಸಾವನ್ನಪ್ಪಿದ್ದು, 4 ಮಂದಿಗೆ ತೀವ್ರ ಗಾಯವಾಗಿದೆ. ಗಾಯಾಳುಗಳನ್ನು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಆಂಧ್ರದ ಚಿತ್ತೂರು ಜಿಲ್ಲೆ ಕಂದಕೂರು ಗ್ರಾಮ ಪಂಚಾಯಿತಿಯ ಕುಕ್ಕಲಪಲ್ಲಿ ಗ್ರಾಮದವರಾಗಿದ್ದು, ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಐವರೂ ಅವರ ಗ್ರಾಮಕ್ಕೆ ತೆರಳುವ ವೇಳೆ ದಾರಿ ಮಧ್ಯೆ ಈ ಅವಘಡ ಜರುಗಿದೆ. ಅವರಲ್ಲಿ ಸಾವನಪ್ಪಿದ್ದವ ಪುರುಶೋತ್ತಮ್ (23) ಎಂದು ಗುರುತಿಸಲಾಗಿದೆ.

ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version