ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿನ ನಗರ ವಾಸಿಗಳಿಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಹೊಸದಾಗಿ ಮನೆ ನಿರ್ಮಿಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 100 ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಗುರಿ ನಿಗಪಡಿಸಿದ್ದು, ಅರ್ಹ ಆಸಕ್ತರು ಫೆ.25 ರೊಳಗೆ ನಿಗಧಿತ ನಮೂನೆಯ ಅರ್ಜಿಯನ್ನು ದೃಢೀಕೃತ ದಾಖಲೆಗಳೊಂದಿಗೆ ಶಿಡ್ಲಘಟ್ಟ ನಗರಸಭೆ ಕಚೇರಿಯಲ್ಲಿ ಸಲ್ಲಿಸಬಹುದು.
ಅರ್ಜಿ ನಮೂನೆಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ವಸತಿ ಶಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಅವ ಮೀರಿದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಜಾತಿಗೆ 17, ಪರಿಶಿಷ್ಟ ಪಂಗಡಕ್ಕೆ 7 ಒಟ್ಟು 24 ಮನೆಗಳು ಮಂಜೂರಾಗಿವೆ. ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗಕ್ಕೆ 66, ಅಲ್ಪ ಸಂಖ್ಯಾತರಿಗೆ 10 ಸೇರಿ ಒಟ್ಟು 76 ಮನೆಗಳು ಮಂಜೂರಾಗಿವೆ ಎಂದು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.