ಅನಧಿಕೃತವಾಗಿ ಬಳಕೆ: 16 ಗೃಹಬಳಕೆ ಸಿಲಿಂಡ‌ರ್ ಜಪ್ತಿ

- Advertisement -
- Advertisement -

Sidlaghatta : ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಅಧಿಕಾರಿಗಳು ನಗರದಲ್ಲಿ ವಿವಿಧ ಕಡೆ ದಾಳಿ ಮಾಡಿ ಅನಧಿಕೃತವಾಗಿ ಬಳಕೆ ಮಾಡುತ್ತಿದ್ದ 16 ಗೃಹಬಳಕೆ ಸಿಲಿಂಡ‌ರ್ ಗಳನ್ನು ಜಪ್ತಿ ಮಾಡಿದ್ದಾರೆ.

ಗೃಹ ಬಳಕೆ ಉದ್ದೇಶಕ್ಕೆ ಮಾತ್ರ ಸೀಮಿತವಾಗಿರುವ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿರುವ ಮಾಹಿತಿ ಮೇರೆಗೆ ನಗರದ ಹೋಟೆಲ್, ಚಿಕನ್ ಶಾಪ್ ಹಾಗೂ ಟೀ ಸ್ಟಾಲ್ ಗಳ ಮೇಲೆ ದಾಳಿ ನಡೆಸಿ ಒಟ್ಟು 16 ಇಂಡೇನ್ ಕಂಪನಿಯ ಸಿಲಿಂಡರ್ ಗಳನ್ನ ಜಪ್ತಿ ಮಾಡಿದ್ದಾರೆ.

ಆಹಾರ ನಿರೀಕ್ಷಕಿ ವೆಂಕಟಲಕ್ಷ್ಮಮ್ಮ ಮತ್ತು ಆಹಾರ ನಿರೀಕ್ಷಕ ಪ್ರಕಾಶ್, ನೇತೃತ್ವದಲ್ಲಿ ದಾಳಿ ಮಾಡಿ 16 ಸಿಲಿಂಡರ್ ಗಳನ್ನು ವಶಕ್ಕೆ ಪಡೆದು ಅವುಗಳನ್ನ ಕರ್ನಾಟಕ ಅಗತ್ಯ ವಸ್ತುಗಳ ಕಾಯಿದೆ 1955ರ ಅಡಿ ವಶಪಡಿಸಿಕೊಂಡು ಸುರಕ್ಷಿತೆಯ ದೃಷ್ಟಿಯಿಂದ ಮುಂದಿನ ಆದೇಶದವರೆಗೂ ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಇಂಡಿಯನ್ ಗ್ಯಾಸ್ ಏಜನ್ಸಿ ರವರ ವಶಕ್ಕೆ ನೀಡಲಾಗಿದೆ. ಇನ್ನು ಈ ದಾಳಿಯಲ್ಲಿ ಆಹಾರ ಇಲಾಖೆಯ ಹೇಮಂತ್ ಇದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!