Home News ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

0
Sidlaghatta July 13 Lok Adalat

Sidlaghatta : ಜುಲೈ 13 ರ ಶನಿವಾರದಂದು ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ನಗರದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗವನ್ನು ಕಕ್ಷಿದಾರರು ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗು ಪ್ರಧಾನ ಸಿವಿಲ್ ನ್ಯಾಯಾಧೀಶೆ ಪೂಜಾ.ಜೆ. ತಿಳಿಸಿದರು.

ನಗರದ ನ್ಯಾಯಾಲಯದಲ್ಲಿ ಸೊಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೌಟುಂಬಿಕ ವ್ಯಾಜ್ಯ, ಸಿವಿಲ್, ಹಣಕಾಸಿನ ವಿಚಾರ, ಬ್ಯಾಂಕ್‌ನಲ್ಲಿ ಸಾಲ ಪಡೆದಿರುವ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ನ್ಯಾಯಾಲಯದಲ್ಲಿ ರಾಜೀ ಮಾಡಿಕೊಂಡರೆ ಮಾನವ ಸಂಬಂಧ, ಮೌಲ್ಯಗಳು, ಶಾಂತಿ, ನೆಮ್ಮದಿಯ ವಾತಾವರಣ ಮೂಡಿ ಕಕ್ಷಿದಾರರ ಅಮೂಲ್ಯವಾದ ಸಮಯ ಮತ್ತು ಹಣ ಇದರಿಂದ ಉಳಿಯುತ್ತದೆ ಎಂದು ಹೇಳಿದರು.

ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಇಚ್ಛಿಸುವ ಕಕ್ಷಿದಾರರು ಸ್ವಯಂ ಪ್ರೇರಿತರಾಗಿ ತಮ್ಮ ವಕೀಲರ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ರಾಜಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version