Home News ಕನ್ನಡಿಗರು ಹೃದಯ ಶ್ರೀಮಂತಿಕೆಯುಳ್ಳವರು

ಕನ್ನಡಿಗರು ಹೃದಯ ಶ್ರೀಮಂತಿಕೆಯುಳ್ಳವರು

0

Sidlaghatta : ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಭಾಷೆಯು ಕೇವಲ ಸಂವಹನ ಮಾಧ್ಯಮ ಮಾತ್ರವಲ್ಲ. ಅದು ನಮ್ಮ ನೆಲದ ಹಾಗೂ ಅನೇಕ ತಲೆಮಾರುಗಳ ಸಂಸ್ಕೃತಿಯನ್ನು ಜತನದಿಂದ ಕಾಪಿಟ್ಟುಕೊಂಡು ಬಂದ ಮಾಧ್ಯಮ. ಆದ್ದರಿಂದಲೇ ಭಾಷೆಗೂ ನೆಲದ ಸಂಸ್ಕೃತಿಗೂ ಅವಿನಾಭಾವ ಸಂಬಂಧವಿದೆ. ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುನ್ನ ಸಲ್ಲಾಪುರಮ್ಮ ದೇವಾಲಯದ ಬಳಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ತಹಶೀಲ್ದಾರ್ ಬಿ.ಎನ್.ಸ್ವಾಮಿ, ನಗರಸಭೆ ಆಯುಕ್ತ ಮಂಜುನಾಥ್, ಅಧ್ಯಕ್ಷ ವೆಂಕಟಸ್ವಾಮಿ, ಬಂಕ್ ಮುನಿಯಪ್ಪ, ಮೇಲೂರು ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಕನ್ನಡ ಪರ ಹಾಗೂ ರೈತ ಪರ ಸಂಘಟನೆಯ ಸದಸ್ಯರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version