Home News ಕನ್ನಡ ರಾಜ್ಯೋತ್ಸವದ ಭವ್ಯ ಸಂಭ್ರಮಕ್ಕೆ ಸಜ್ಜು

ಕನ್ನಡ ರಾಜ್ಯೋತ್ಸವದ ಭವ್ಯ ಸಂಭ್ರಮಕ್ಕೆ ಸಜ್ಜು

0
Sidlaghatta Kannada Rajyotsava 2025

Sidlaghatta : ರೇಷ್ಮೆ ನಗರ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ನವೆಂಬರ್ 1ರಂದು 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಜ್ಜಾಗಿದೆ ಎಂದು ಸಮಿತಿಯ ಮುಖಂಡ ರಾಮಾಂಜನೇಯ ತಿಳಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಕನ್ನಡಪರ ಸಂಘಟನೆಗಳು ಒಗ್ಗೂಡಿ ರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲು ಸಮ್ಮತಿಸಿವೆ ಎಂದು ಹೇಳಿದರು.

ರಾಜ್ಯೋತ್ಸವದ ಅಂಗವಾಗಿ ಬೆಳಗ್ಗೆ ನಗರದ ಬಸ್ ನಿಲ್ದಾಣದ ಬಳಿ ಧ್ವಜಾರೋಹಣ ನೆರವೇರಿಸಲಿದ್ದು, ನಂತರ 150 ಅಡಿ ಉದ್ದದ ಕನ್ನಡ ಧ್ವಜದ ಮೆರವಣಿಗೆ ಹಾಗೂ ಜಾನಪದ ನೃತ್ಯ ಕಲಾ ತಂಡಗಳ ಪ್ರದರ್ಶನ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯಲಿದೆ. ತಾಯಿ ಭುವನೇಶ್ವರಿ ದೇವಿಯ ಪಲ್ಲಕ್ಕಿ ಮೆರವಣಿಗೆ ನಗರದ ಮಧ್ಯಭಾಗದಲ್ಲಿ ಸಂಚರಿಸಿ ಕನ್ನಡಾಭಿಮಾನವನ್ನು ಸಾರಲಿದೆ.

ಮಧ್ಯಾಹ್ನ 12 ಗಂಟೆಗೆ ಅಶೋಕರಸ್ತೆಯ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಮುಂಭಾಗ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುತ್ತದೆ.

ಸಂಜೆ 5 ಗಂಟೆಗೆ ಡಾ. ಪುನೀತ್ ರಾಜ್‌ಕುಮಾರ್ ವೇದಿಕೆಯಲ್ಲಿ ರಸಮಂಜರಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ, ರೂಪಕ ಹಾಗೂ ಸಂಗೀತ ಪ್ರದರ್ಶನಗಳು ನಡೆಯಲಿವೆ. ಈ ಸಂದರ್ಭದಲ್ಲಿ ತುಕಾಲಿ ಸ್ಟಾರ್ ಸಂತು ಮತ್ತು ಕಾಮಿಡಿ ಮ್ಯೂಸಿಕಲ್ ನೈಟ್ಸ್ ತಂಡದ ಕಲಾವಿದರು ಮನರಂಜನೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸೂರಿ (ಭಗತ್), ಸುನಿಲ್, ರೂಪಸಿರಮೇಶ್, ಮುನಿಕೆಂಪಣ್ಣ, ಭಕ್ತರಹಳ್ಳಿ ಪ್ರತೀಶ್, ನಾರಾಯಣಸ್ವಾಮಿ, ಮುನಿರಾಜು (ಕುಟ್ಟಿ), ಶ್ರೀರಾಮ್, ಸೋಮಶೇಖರ್, ಲಕ್ಷ್ಮಿದೇವಿ, ಮಂಜುಳ ಎಂ, ಲಾವಣ್ಯ, ಮಂಜುಳ ಎ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version