Sidlaghatta, Chikkaballapur : ನವೆಂಬರ್ 29ರಂದು ಶಿಡ್ಲಘಟ್ಟದಲ್ಲಿ ಕನ್ನಡ ರಾಜ್ಯೋತ್ಸವವನ್ನು ನೆರವೇರಿಸಲು ಪ್ರಗತಿಪರ ಹೋರಾಟಗಾರರ ಸಂಘದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ವಿಸ್ಡಂ ನಾಗರಾಜ್ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟೆ ವೃತ್ತದಲ್ಲಿ ರಾಜ್ಯೋತ್ಸವದ ಮುಖ್ಯ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಎನ್.ರವಿಕುಮಾರ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕ ಕುಶಲ್ ಚೌಕ್ಸೇ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಕನ್ನಡ ಚಲನಚಿತ್ರ ಕ್ಷೇತ್ರದ ಜೂನಿಯರ್ ಕಲಾವಿದರೂ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ, ರಸ ಸಂಜೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಳೆದ ವರ್ಷ ರಾಜ್ಯೋತ್ಸವ ನಡೆಸಿ ಉಳಿದ ಹಣದ ಜೊತೆಗೆ ಸಂಘಟನೆಯವರು ಸ್ವಂತವಾಗಿ ಹಣ ನೀಡಿ ಈ ವರ್ಷದ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಸಾರ್ವಜನಿಕರಿಂದ ಯಾವುದೇ ದೇಣಿಗೆ ಸಂಗ್ರಹಣೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಚನ್ನೇಗೌಡ, ಉಪಾಧ್ಯಕ್ಷ ಸಿ.ಎಂ.ಬೈರೇಗೌಡ, ಕಾರ್ಯದರ್ಶಿ ರವಿಪ್ರಕಾಶ್, ಖಜಾಂಚಿ ಅಹಮದ್, ಮನೋಜ್ ಕುಮಾರ್, ಮಧುಲತಾ, ಪ್ರದೀಪ್, ಸುಬ್ರಮಣಿ, ಎಸ್.ಆರ್.ಮಂಜುನಾಥ್, ದ್ಯಾವಪ್ಪ, ಶ್ರೀನಿವಾಸ್, ಚಲುವರಾಜ್ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.
For Daily Updates WhatsApp ‘HI’ to 7406303366
