Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷರನ್ನಾಗಿ ಜಂಗಮಕೋಟೆಯ ಮುನಿರಾಜು(ಕುಟ್ಟಿ) ಅವರನ್ನು ಕರವೇ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಆಯ್ಕೆ ಮಾಡಿ ಆದೇಶ ಪತ್ರವನ್ನು ನೀಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ನಾಡು, ನುಡಿ, ನೆಲ, ಜಲ, ಭಾಷೆ ವಿಚಾರವಾಗಿ ಸಂಘಟನೆ ಹಮ್ಮಿಕೊಂಡಿದ್ದ ವಿವಿಧ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಮುನಿರಾಜು ಅವರನ್ನು ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಸೂಚನೆಯಂತೆ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.