ಕರ್ನಾಟಕ ದರ್ಶನ ಐದು ದಿನಗಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

- Advertisement -
- Advertisement -

Sidlaghatta : ಕನ್ನಡ ನಾಡಿನ ಪ್ರತಿಯೊಂದು ದೇವಾಲಯವು ಕಲೆ ಮತ್ತು ಸಂಸ್ಕೃತಿಯ ತಾಣಗಳಾಗಿದ್ದು, ಇಲ್ಲಿನ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಯನ್ನು ಯುವ ಪೀಳಿಗೆಗೆ ಪರಿಚಯಿಸಿ ಕೊಡಬೇಕಾದ ಅನಿವಾರ್ಯತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರ ಕುಮಾರ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಶಾಲಾ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಸಹಕಾರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಕರ್ನಾಟಕ ದರ್ಶನ ಐದು ದಿನಗಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇತಿಹಾಸ, ಪೌರನೀತಿ, ವಿಜ್ಞಾನ ಮತ್ತಿತರ ವಿಷಯಗಳನ್ನು ಕೇವಲ ತರಗತಿ ಕೋಣೆಯಲ್ಲಿ ಬೋಧಿಸುವುದಕ್ಕಿಂತ ಪ್ರವಾಸಗಳ ಮೂಲಕ, ಸ್ಥಳ ವೀಕ್ಷಣೆ ಮೂಲಕ ಕಲಿಯುವುದರಿಂದ ಮಕ್ಕಳಲ್ಲಿ ಶಾಶ್ವತ ಕಲಿಕೆಯಾಗುತ್ತದೆ. ದೇಶಾಭಿಮಾನ , ನಾಡು ಮತ್ತು ಭಾಷಾಭಿಮಾನ ಮತ್ತಿತರ ಮೌಲ್ಯಗಳನ್ನು ಪ್ರವಾಸಗಳಿಂದ ರೂಢಿಸಬಹುದಾಗಿದೆ ಎಂದರು.

ತಾಲ್ಲೂಕಿನ ವಿವಿಧ ಶಾಲೆಗಳ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವಾಸ ಕೈಗೊಂಡಿದ್ದು, ಬಡ , ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮತ್ತು ಕಲಿಕೆಯಲ್ಲಿ ಉತ್ತಮ ಪ್ರಗತಿ ತೋರಿದ ವಿದ್ಯಾರ್ಥಿಗಳಿಗೆ ಈ ಪ್ರವಾಸದಿಂದ ಅನುಕೂಲವಾಗಲಿದೆ ಎಂದರು.

ಶಿಕ್ಷಣ ಸಂಯೋಜಕ ಯು.ವೈ. ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕದಲ್ಲಿ ಓದಿದ ವಿಷಯಗಳನ್ನು ಪ್ರತ್ಯಕ್ಷವಾಗಿ ನೋಡಿ ಕಲಿಯಲು ಪ್ರವಾಸಗಳು ಸಹಕಾರಿಯಾಗಿವೆ. ಐತಿಹಾಸಿಕ ಸ್ಥಳಗಳು, ವಸ್ತುಸಂಗ್ರಹಾಲಯಗಳು ಮತ್ತು ವಿಜ್ಞಾನ ಕೇಂದ್ರಗಳಿಗೆ ಭೇಟಿ ನೀಡುವುದರಿಂದ ಸಾಮಾನ್ಯ ಜ್ಞಾನ ಹೆಚ್ಚಾಗುತ್ತದೆ ಎಂದರು.

ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ, ಪ್ರವಾಸದ ಮಾರ್ಗದರ್ಶಿ ಶಿಕ್ಷಕ ಎಚ್ಎಸ್ ರುದ್ರೇಶಮೂರ್ತಿ ಮಾತನಾಡಿ,

ಶಾಲೆಯ ನಾಲ್ಕು ಗೋಡೆಗಳ ನಡುವೆ ಇರುವ ಕಲಿಕೆಗಿಂತ ಹೊರಗಿನ ಪ್ರಪಂಚದ ಅನುಭವವು ಹೊಸ ಚೈತನ್ಯ ನೀಡುತ್ತದೆ. ವಿವಿಧ ಪ್ರದೇಶಗಳ ಆಹಾರ, ಉಡುಗೆ-ತೊಡುಗೆ ಮತ್ತು ಸಂಪ್ರದಾಯಗಳನ್ನು ಹತ್ತಿರದಿಂದ ತಿಳಿಯಲು ಇದು ಉತ್ತಮ ಅವಕಾಶ. ಪ್ರವಾಸವು ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ. ದಿನನಿತ್ಯದ ಶೈಕ್ಷಣಿಕ ಒತ್ತಡದಿಂದ ಹೊರಬರಲು ಮತ್ತು ಮನಸ್ಸಿಗೆ ಆಹ್ಲಾದ ನೀಡಲು ಪ್ರವಾಸಗಳು ಅಗತ್ಯ ಎಂದರು.

ಶಿಡ್ಲಘಟ್ಟ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್. ವಿ. ವೆಂಕಟರೆಡ್ಡಿ, ಶಿಕ್ಷಣ ಸಂಯೋಜಕ ಎಚ್.ವಿ. ವೆಂಕಟರೆಡ್ಡಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸರಸ್ವತಮ್ಮ, ನಿರ್ದೇಶಕ ಸುದರ್ಶನ್, ಪ್ರವಾಸೋದ್ಯಮ ಇಲಾಖೆಯ ಸಂಯೋಜಕ ವೆಂಕಟೇಶ್, ಪ್ರವೀಣ್ ಕುಮಾರ್ ,ಪ್ರಭು, ಮಾರ್ಗದರ್ಶಿ ಶಿಕ್ಷಕರಾದ ಮಂಜುನಾಥ್, ರೇಖಾ, ನೇತ್ರ , ನಿರ್ಮಲ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!