Sidlaghatta : ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರ ದೂರದೃಷ್ಟಿ, ಜನಪರ ಆಡಳಿತ, ಸಮಾಜಮುಖಿ ಚಿಂತನೆ ಮತ್ತು ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಕರೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಹನೀಯರ ಜಯಂತಿಗಳನ್ನು ಆಚರಿಸುವ ಉದ್ದೇಶ ಅವರ ಆದರ್ಶಗಳು, ಸಮಾಜಮುಖಿ ಕಾರ್ಯಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದಾಗಿದೆ. 12ನೇ ಶತಮಾನದ ಬಸವಣ್ಣ, 16ನೇ ಶತಮಾನದ ನಾಡಪ್ರಭು ಕೆಂಪೇಗೌಡರು, ಮಹರ್ಷಿ ವಾಲ್ಮೀಕಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಅವರ ಸೇವೆ ಮತ್ತು ಚಿಂತನೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.
100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ :

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ ಶಾಸಕ ರವಿಕುಮಾರ್, “ಮಾತೃದೇವೋ ಭವ, ಪಿತೃದೇವೋ ಭವ, ಗುರುದೇವೋ ಭವ” ಎಂಬ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಹಸೀಲ್ದಾರ್ ಗಗನ ಸಿಂಧು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಶತಮಾನಗಳ ಹಿಂದೆಯೇ ಬೆಂಗಳೂರಿನ ಭವಿಷ್ಯವನ್ನು ಊಹಿಸಿ ನಗರ ನಿರ್ಮಾಣಕ್ಕೆ ಯೋಜನೆ ರೂಪಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದರು.
ವಿದ್ಯಾರ್ಥಿಗಳು ಸಹ ಜೀವನದಲ್ಲಿ ಸ್ಪಷ್ಟ ಗುರಿ, ದೃಢ ಸಂಕಲ್ಪ ಮತ್ತು ದೂರದೃಷ್ಟಿಯೊಂದಿಗೆ ಯೋಜಿತವಾಗಿ ಪರಿಶ್ರಮಪಟ್ಟರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಸಲಹೆ ನೀಡಿದರು.
ಅದ್ದೂರಿ ಪಲ್ಲಕ್ಕಿ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ :
ಕಾರ್ಯಕ್ರಮಕ್ಕೂ ಮುನ್ನ ನಗರದ ಮಯೂರ ವೃತ್ತದ ಬಳಿಯ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಬಸ್ ನಿಲ್ದಾಣದಿಂದ ಟಿ.ಬಿ. ರಸ್ತೆ, ಕೋಟೆ ವೃತ್ತ ಹಾಗೂ ಕಾಂಗ್ರೆಸ್ ಭವನ ರಸ್ತೆ ಮಾರ್ಗವಾಗಿ ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿಗಳ ಅದ್ದೂರಿ ಮೆರವಣಿಗೆ ನಡೆಯಿತು.
ಡೊಳ್ಳು ಕುಣಿತ, ತಮಟೆ ವಾದನ, ಜಾನಪದ ಕಲಾತಂಡಗಳ ಮನಮೋಹಕ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದವು.
- BUILT FOR APPLE INTELLIGENCE — Personal, private, powerful. Write, express yourself and get things done effortlessly.
- A18 CHIP. FAST INTO THE FUTURE — A18 chip empowers Apple Intelligence, gaming and iOS updates for years to come.
- SUPERSIZED BATTERY LIFE — Text, browse and binge movies and shows with up to 26 hours of video playback — the best batte…
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ನಗರಸಭೆ ಆಯುಕ್ತೆ ಅಮೃತ, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಅಪ್ಪೇಗೌಡನಹಳ್ಳಿ ಲಕ್ಷ್ಮೀನಾರಾಯಣರೆಡ್ಡಿ, ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್, ಯುವ ಘಟಕದ ಅಧ್ಯಕ್ಷ ವೆಂಕಟಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಅದ್ದೂರಿ ಪಲ್ಲಕ್ಕಿ ಮೆರವಣಿಗೆಯಲ್ಲಿ ಶಾಸಕ ಬಿ.ಎನ್. ರವಿಕುಮಾರ್, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಮಾಜಿ ಶಾಸಕ ಎಂ. ರಾಜಣ್ಣ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ, ರೈತರ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮುನಿನಂಜಪ್ಪ, ತಾದೂರು ಮಂಜುನಾಥ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಜಯಂತಿ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದರು.








