ಕುತ್ತಾಂಡಹಳ್ಳಿಯಲ್ಲಿ ಬೀದಿ ನಾಯಿಗಳ ದಾಳಿಗೆ 5 ಕುರಿಗಳ ಸಾವು

- Advertisement -
- Advertisement -

Kuttandahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಭಯಾನಕ ಘಟನೆ ನಡೆದಿದೆ. ಹತ್ತಾರು ಬೀದಿ ನಾಯಿಗಳ ಗುಂಪು, ಕುರಿಗಳ ಹಿಂಡಿನ ಮೇಲೆ ದಾಳಿ ನಡೆಸಿ, ಕತ್ತು ಹಾಗೂ ಹೊಟ್ಟೆ ಕಚ್ಚಿದ ಪರಿಣಾಮ 5 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 4 ಕುರಿಗಳು ತೀವ್ರವಾಗಿ ಗಾಯಗೊಂಡಿವೆ.

ಗ್ರಾಮದ ಮುನಿವೆಂಕಟರಾಯಪ್ಪ ಅವರಿಗೆ ಸೇರಿದ ಈ ಕುರಿಗಳು ಅವರ ಕುರಿ ದೊಡ್ಡಿಯಲ್ಲಿ ಇದ್ದಾಗ, ನಾಯಿಗಳ ಗುಂಪು ದೊಡ್ಡಿಗೆ ನುಗ್ಗಿ ಹಲ್ಲೆ ನಡೆಸಿದೆ. ಹಲವಾರು ಕುರಿಗಳನ್ನು ಹರಿದಾಡಿಸುತ್ತ, ಕುಕ್ಕಿದ ಹಾಗೂ ಕಚ್ಚಿದ ದುರ್ಘಟನೆ ಗ್ರಾಮಸ್ಥರಲ್ಲಿ ಆತಂಕವನ್ನು ಉಂಟುಮಾಡಿದೆ.

ಪಶು ವೈದ್ಯಾಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಕುರಿಗಳಿಗೆ ತಕ್ಷಣ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಘಟನೆ ಕುರಿ ಸಾಕಣೆ ಮಾಡುತ್ತಿರುವ ರೈತರಲ್ಲಿ ಆತಂಕವನ್ನು ಉಂಟುಮಾಡಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ತ್ವರಿತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಡಳಿತವನ್ನು ಒತ್ತಾಯಿಸಿದ್ದಾರೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!