Home News ಕೆರೆಗಳನ್ನು ದುರಸ್ಥಿಗೊಳಿಸಲು ಮುಂದಾದ ಅಧಿಕಾರಿಗಳು

ಕೆರೆಗಳನ್ನು ದುರಸ್ಥಿಗೊಳಿಸಲು ಮುಂದಾದ ಅಧಿಕಾರಿಗಳು

0
Sidlaghatta Lake Renovation Rain

ಕಳೆದ ಒಂದು ವಾರದಿಂದ ಸುರಿದ ಮಳೆಗೆ ಪಂಚಾಯತ್‍ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಸೇರಿದ ಮೂರು ಕೆರೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕೆರೆಯಲ್ಲಿರುವ ನೀರು ಪೋಲಾಗದಂತೆ ಮರಳುತುಂಬಿದ ಮೂಟೆಗಳನ್ನು ಇಡುವ ಕೆಲಸವನ್ನು ಆರಂಭಿಸಲಾಗಿದೆ.

 ಗಂಜಿಗುಂಟೆ ಗ್ರಾಮ ಪಂಚಾಯಿತಿಯ ಚೊಕ್ಕನಹಳ್ಳಿಯಲ್ಲಿ ಕೆರೆಕಟ್ಟೆ ಒಡೆದು ವ್ಯರ್ಥವಾಗಿ ಹರಿಯುತ್ತಿರುವ ನೀರನ್ನು ತಡೆಯೊಡ್ಡಲು ಮರಳು ತುಂಬಿದ ಮೂಟೆಗಳನ್ನು ಇಡುವ ಕೆಲಸವನ್ನು ಮಾಡಲಾಗುತ್ತಿದೆ. ಪಂಚಾಯತ್‍ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಪ್ಪ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಎಇಇ ರಮೇಶ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾಮಗಾರಿಯನ್ನು ಕಂಡು ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಮಳೆ ಬಿದ್ದ ಸಂದರ್ಭದಲ್ಲಿ ಕೆರೆಗಳ ಕಟ್ಟೆ ಒಡೆದು ನೀರು ಮಣ್ಣುಪಾಲು ಆಗುವುದು ಸಾಮಾನ್ಯವಾಗಿದೆ. ಈಗಾಗಲೇ ಈ ಭಾಗದಲ್ಲಿ ಅಂತರ್ಜಲ ಮಟ್ಟ ಕುಸಿದು ತೊಂದರೆಯನ್ನು ಅನುಭವಿಸುತ್ತಿದ್ದರೂ ಸಹ ಅಧಿಕಾರಿಗಳು ಕೇವಲ ಮಳೆ ನೀರು ಸಂರಕ್ಷಣೆ ಮಾಡುವ ನೆಪದಲ್ಲಿ ಕೆಲವೊಂದು ಕಾಮಗಾರಿಗಳನ್ನು ನಡೆಸಿ ಕೈತೊಳೆದುಕೊಳ್ಳುವ ಸಂಪ್ರದಾಯವನ್ನು ರೂಡಿಸಿಕೊಂಡಿದ್ದಾರೆ. ಕೂಡಲೇ ಶಾಶ್ವತವಾಗಿ ಇರುವಂತಹ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

Exit mobile version