Home News ಶಿಡ್ಲಘಟ್ಟದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 1223 ಪ್ರಕರಣಗಳು ಇತ್ಯರ್ಥ

ಶಿಡ್ಲಘಟ್ಟದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 1223 ಪ್ರಕರಣಗಳು ಇತ್ಯರ್ಥ

0
sidlaghatta Lok Adalat march 2026

Sidlaghatta : ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 1223 ಪ್ರಕರಣಗಳು ಇತ್ಯರ್ಥಗೊಂಡು 3 ಕೋಟಿ 17 ಲಕ್ಷ 36 ಸಾವಿರ 928 ರೂ ಪಾವತಿಸಲಾಗಿದೆ.

ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ.ಸಿ.ಎಸ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಸ್.ರಂಜಿತಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ವಿವಿಧ ರೀತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು

ಸಂಧಾನಕಾರರಾಗಿ ವಕೀಲರಾದ ಎಚ್.ಎಂ.ದರ್ಶನ್, ಶಾಂತಕುಮಾರ್ ಮತ್ತು ಮಂಜುನಾಥ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version