Home News ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ

0
Sidlaghatta Malamachanahalli Dr. B R Ambedkar Statue Unveiling

Malamachanahalli, Sidlaghatta : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ಯಾವುದೇ ಒಂದು ಜಾತಿ ಧರ್ಮಕ್ಕೆ ಸೇರಿದವರಲ್ಲ, ಎಲ್ಲರೂ ಶಾಂತಿ, ಸಹೋದರತೆ ಹಾಗು ಸಮಾನತೆಯಿಂದ ಬಾಳಬೇಕು ಎಂಬ ನಿಟ್ಟಿನಲ್ಲಿ ಸಂವಿಧಾನ ರಚಿಸಿದ ಅವರ ತತ್ವ, ಸಿದ್ದಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕುಶಾಲ್‌ ಚೌಕ್ಸಿ ಹೇಳಿದರು.

ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕದಾಸರಹಳ್ಳಿ ಗ್ರಾಮದ ಶ್ರೀ ಪೂಜಮ್ಮದೇವಿ ಸೇವಾ ಯುವಕರ ಸಂಘ ಹಾಗೂ ಚಿಕ್ಕದಾಸರಹಳ್ಳಿ ಗ್ರಾಮಸ್ಥರಿಂದ ಭಾನುವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನ ನಮಗೆಲ್ಲರಿಗೂ ಸ್ಪೂರ್ತಿದಾಯಕವಾಗಬೇಕಿದೆ. ಭಾರತ ಇಂದು ಮುಂದುವರೆದ ದೇಶಗಳಲ್ಲೊಂದಾಗಿದ್ದು ಇದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಯೇ ಕಾರಣವಾಗಿದೆ. ದೇಶದ ಸಮಸ್ತ ಜನರ ಭವಿಷ್ಯ ರೂಪಿಸುವಲ್ಲಿ ಸಂವಿಧಾನ ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿ.ರಾಜಾಕಾಂತ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ಹಲವಾರು ರೀತಿಯ ಶೋಷಣೆ, ದೌರ್ಜನ್ಯ, ದಬ್ಬಾಳಿಕೆಗಳನ್ನು ಅನುಭವಿಸಿದವರು. ಶೋಷಣೆಗೆ ಒಳಗಾಗಿರುವ ದಲಿತರು, ಹಿಂದುಳಿದ ವರ್ಗ, ಹಾಗೂ ಅಲ್ಪಸಂಖ್ಯಾಂತರ ಉದ್ದಾರಕ್ಕಾಗಿ ಮತ್ತು ದಲಿತರಿಗೆ ಶಿಕ್ಷಣವನ್ನು ಒದಗಿಸಲು ಸಾಕಷ್ಟು ಶ್ರಮಿಸಿ ಸಂವಿಧಾನವನ್ನು ರಚನೆ ಮಾಡಿದ್ದಾರೆ. ಇಂತಹ ಮಹಾತ್ಮರ ಪುತ್ಥಳಿಗಳನ್ನು ನಿರ್ಮಿಸಿದರೆ ಸಾಲದು ಬದಲಿಗೆ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಿ ಸಮಾಜದಲ್ಲಿ ಉನ್ನತ ವ್ಯಕ್ತಿಗಳನ್ನಾಗಿ ರೂಪಿಸಿದ್ದೇ ಆದಲ್ಲಿ ಮಹಾತ್ಮರ ಹೋರಾಟಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಅಂಜಿನಪ್ಪ ಪುಟ್ಟು ಮಾತನಾಡಿ ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಎಂಬುದು ಕೇವಲ ಹೆಸರಲ್ಲ ಅದೊಂದು ಅಗಾಧವಾದ ಶಕ್ತಿ ಎಂದರು.

ವಿಶ್ವದ ಅತಿ ದೊಡ್ಡ ಸಂವಿಧಾನ ರಚಿಸುವ ಮೂಲಕ ಭಾರತೀಯರ ಬದುಕು ರೂಪಿಸಿದ ಮಹಾನ್ ನಾಯಕ ಅವರಾಗಿದ್ದಾರೆ. ಅಂಬೇಡ್ಕರ್‌ ರ ಸತತ ಪರಿಶ್ರಮದ ಫಲವಾಗಿ ಸಂವಿಧಾನ ರೂಪುಗೊಂಡಿದೆ. ದೀನ ದಲಿತರಿಗೆ ಬೆಳಕು ನೀಡುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದ್ದಾರೆ. ಹೀಗಾಗಿ ಅವರು ದೇಶದ ಪ್ರತಿಯೊಬ್ಬರ ಮನದಲ್ಲಿ ಅಚ್ಚಳಿಯದೇ ಉಳಿದುಕೊಂಡಿದ್ದಾರೆ ಎಂದರು.

ಡಾ.ಬಿ.ಆರ್.ಆಂಬೇಡ್ಕರ್ ರವರ ನೂತನ ಪುತ್ಥಳಿ ಆನಾವರಣಗೊಳಿಸಿದ ಗಣ್ಯರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಬ್ಯಾಟರಾಯಶೆಟ್ಟಿ, ಜೆಡಿಎಸ್ ಮುಖಂಡ ಬಿ.ಎನ್.ಸಚಿನ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸೀಕಲ್ ಆನಂದ್‌ಗೌಡ, ಕೆಎಂಎಫ್ ನಿರ್ದೇಶಕ ಆರ್.ಶ್ರೀನಿವಾಸ್, ಸರ್ಕಲ್ ಇನ್ಸ್ ಪೆಕ್ಟರ್ ಎಂ.ಶ್ರೀನಿವಾಸ್, ತಾ.ಪಂ ಮಾಜಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಬಿಜೆಪಿ ಮುಖಂಡರಾದ ಕಂಬದಹಳ್ಳಿ ಸುರೇಂದ್ರಗೌಡ, ದಾಮೋಧರ್, ಸ್ಕೂಲ್ ದೇವರಾಜ್, ಮಾಳಮಾಚನಹಳ್ಳಿ ಗ್ರಾಮ ಪಂಚಾಯತಿ ಪಿಡಿಓ ಶೈಲಜಾ, ದಸಂಸ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್, ಮುಖಂಡರಾದ ನಾಗನರಸಿಂಹ, ಕೆ.ರವಿಶಂಕರ್, ಕೆ.ನಾರಾಯಣಸ್ವಾಮಿ. ಶ್ರೀ ಪೂಜಮ್ಮ ಸೇವಾ ಯುವಕರ ಸಂಘದ ಅಧ್ಯಕ್ಷ ದ್ಯಾವಪ್ಪ.ಬಿ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಗ್ರಾಮದ ಎಲ್ಲಾ ಯುವಕರು ಮತ್ತು ಗ್ರಾಮಸ್ಥರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version