15.1 C
Sidlaghatta
Wednesday, February 11, 2026

ಮೇಲೂರು ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಧಿಕೃತ ಬೀಳ್ಕೊಡುಗೆ

- Advertisement -
- Advertisement -

Melur, Sidlaghatta : ಗ್ರಾಮ ಪಂಚಾಯಿತಿಗೆ ಆಯ್ಕೆಯಾದವರು ಅಧಿಕಾರದಲ್ಲಿದ್ದಾಗ ಮಾಡುವ ಜನಪರ ಕೆಲಸಗಳು ಮಾತ್ರ ಅವರ ಹೆಸರನ್ನು ಜನರ ಮನಸ್ಸಿನಲ್ಲಿ ಉಳಿಸುತ್ತವೆ,” ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ. ಉಮೇಶ್ ತಿಳಿಸಿದರು.

ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ಸದಸ್ಯರ 5 ವರ್ಷಗಳ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಸದಸ್ಯರಿಗೆ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು. ಪಂಚಾಯಿತಿಗೆ ಈಗ ಆಡಳಿತಾಧಿಕಾರಿ ನೇಮಕವಾಗಿದ್ದು, ಸದಸ್ಯರು ಇದುವರೆಗೆ ಮಾಡಿದ ಸೇವೆಯನ್ನು ಸ್ಮರಿಸಲಾಯಿತು.

“ನರೇಗಾ ಮತ್ತು ಸರ್ಕಾರದ ಬೇರೆ ಬೇರೆ ಯೋಜನೆಗಳನ್ನು ಬಳಸಿ ಹಳ್ಳಿಯ ರಸ್ತೆ, ನೀರು ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟಿದ್ದೇವೆ. ಜನರ ಸೇವೆ ಮಾಡಿರುವ ತೃಪ್ತಿ ನಮಗಿದೆ,” ಎಂದು ಉಮೇಶ್ ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಕೆ.ವಿ. ಶಾರದಾ ಮಾತನಾಡಿ, “ಅಧಿಕಾರ ಎಂಬುದು ಯಾರಿಗೂ ಶಾಶ್ವತವಲ್ಲ. ಆದರೆ ಪ್ರಜಾಪ್ರಭುತ್ವದಲ್ಲಿ ಜನರ ಕೆಲಸ ಮಾಡುವುದೇ ಮುಖ್ಯ. ಕಳೆದ 5 ವರ್ಷಗಳಲ್ಲಿ ಹಳ್ಳಿಗಳ ಪ್ರಗತಿಗೆ ಎಲ್ಲಾ ಸದಸ್ಯರು ನೀಡಿದ ಸಹಕಾರಕ್ಕೆ ಧನ್ಯವಾದಗಳು,” ಎಂದರು. ಇದೇ ಸಂದರ್ಭದಲ್ಲಿ ಎಲ್ಲಾ ಸದಸ್ಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಶಶಿಕಲಾ, ಸದಸ್ಯರಾದ ರವಿಪ್ರಸಾದ್, ಶ್ರೀನಿವಾಸ್, ಶಿವಾನಂದ, ಭಾಗ್ಯಲಕ್ಷ್ಮೀ ಸೇರಿದಂತೆ ಹಲವು ಸದಸ್ಯರು ಮತ್ತು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!