Y Hunasenahalli, Sidlaghatta : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ನಮ್ಮ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರು ಪಕ್ಷಾತೀತವಾಗಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರದ ಮತದಾರರ ಪ್ರೀತಿ ಪಾತ್ರರಾಗಿದ್ದಾರೆ ಎಂದು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ ತಿಳಿಸಿದರು..
ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಕೇಂದ್ರಸ್ಥಾನದ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ನಾನಾ ಸಂಘ ಸಂಸ್ಥೆಗಳಿಂದ ಹಮ್ಮಿಕೊಂಡಿದ್ದ ಶಾಸಕ ಬಿ.ಎನ್.ರವಿಕುಮಾರ್ ಅವರ 57 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ನಾನಾ ಸೇವಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಶಿಡ್ಲಘಟ್ಟವು ಆಂಧ್ರದ ಗಡಿಗೆ ಅಂಟಿಕೊಂಡ ಅಭಿವೃದ್ದಿಯಲ್ಲಿ ಹಿಂದುಳಿದ ಕ್ಷೇತ್ರವಾಗಿದ್ದು ಇಲ್ಲಿನ ಜನರ ನಿರೀಕ್ಷೆಗಳು ಹೆಚ್ಚಿವೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಸಾಕಷ್ಟು ಅನುದಾನ ಸಿಗುತ್ತಿಲ್ಲ. ಆದರೂ ನಮ್ಮ ಶಾಸಕರು ವಿವಿಧ ಮೂಲಗಳಿಂದ ಅನುದಾನ ಸಂಗ್ರಹಿಸಿ ಮೂಲ ಸೌಕರ್ಯಗಳನ್ನು ಕಲ್ಪಿಸಿ ಕ್ಷೇತ್ರದ ಅಭಿವೃದ್ದಿಗೆ ಪಣತೊಟ್ಟಿದ್ದಾರೆ ಎಂದರು.
ಈ ಕ್ಷೇತ್ರದ ಮತದಾರರು ಹಾಗೂ ಭಗವಂತನ ಆಶೀರ್ವಾದದಿಂದ ಶಾಸಕ ರವಿಕುಮಾರ್ ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯ ಹೆಚ್ಚಿ ಈ ಕ್ಷೇತ್ರದ ಜನ ಸಾಮಾನ್ಯರ ಸೇವೆ ಮಾಡಲು ಇನ್ನಷ್ಟು ಶಕ್ತಿ ಸಾಮರ್ಥ್ಯ ನೀಡಲಿ ಎಂದು ಆಶಿಸಿದರು.
57 ಕೆಜಿ ತೂಕದ ಕೇಕ್ ಕತ್ತರಿಸಿ ಹಂಚಿದರು. ವಿವಿಧ ತಳಿಯ 57 ಸಸಿಗಳನ್ನು ನೆಟ್ಟರು. ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ವಕೀಲ ವೆಂಕಟೇಶ್, ಮುಖಂಡರಾದ ಬೂಸ ನಾರಾಯಣಸ್ವಾಮಿ, ಕದಿರಿನಾಯಕನಹಳ್ಳಿ ರವಿಕುಮಾರ್, ಬೇಕ್ರಿ ನರಸಿಂಹ ಗೌಡ, ಶಿವು, ಗಜ್ಜಿಗಾನಹಳ್ಳಿ ರಮೇಶ್, ಬ್ಯಾಂಕ್ ಗೌಡ, ರಾಘವೇಂದ್ರ, ಗಂಗಾಧರ್, ಮುದ್ದುಕೃಷ್ಣ, , ಬೀರಪನಹಳ್ಳಿ ಎಂಪಿಸಿಎಸ್ ನರಸಿಂಮೂರ್ತಿ, ನಾರಾಯಣಸ್ವಾಮಿ, ಶಿವಕುಮಾರ್, ನಟರಾಜ್ ಹಾಜರಿದ್ದರು.
For Daily Updates WhatsApp ‘HI’ to 7406303366









