ಆಯವ್ಯಯದಲ್ಲಿ 10 ಲಕ್ಷ ರೂಗಳು ಮೀಸಲಿಡಲು ಬೀದಿಬದಿ ವ್ಯಾಪಾರಿಗಳ ಒತ್ತಾಯ

0
551
Sidlaghatta Municipal Council Budget

ಅಧ್ಯಕ್ಷೆ ಸುಮಿತ್ರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 23 ರಂದು ನಡೆಯಲಿರುವ ನಗರಸಭೆಯ ಆಯವ್ಯಯದಲ್ಲಿ ಬೀದಿಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ 10 ಲಕ್ಷ ರೂಗಳನ್ನು ಮೀಸಲಿಡಬೇಕೆಂದು ಒತ್ತಾಯಿಸಿ ನಗರಸಭೆಯ ಪೌರಾಯುಕ್ತ ಶ್ರೀಕಾಂತ್ ಅವರಿಗೆ ಬೀದಿಬದಿ ವ್ಯಾಪಾರಿಗಳ ಸಂಘದಿಂದ ಮನವಿ ಪತ್ರ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಶ್ರೀ ರಾಮ್ ಅವರ ನೇತೃತ್ವದಲ್ಲಿ ನಗರಸಭೆಯ ಪೌರಾಯುಕ್ತ ಶ್ರೀಕಾಂತ್ ಅವರನ್ನು ಮಂಗಳವಾರ ಭೇಟಿ ಮಾಡಿದ ಬೀದಿಬದಿ ವ್ಯಾಪಾರಿಗಳು, ತಾಲ್ಲೂಕಿನಲ್ಲಿ 580 ಜನ ಬೀದಿ ಬದಿ ವ್ಯಾಪಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಲ್ಯಾಣಕ್ಕಾಗಿ ನಗರಸಭೆಯ ವಾರ್ಷಿಕ ಬಜೆಟ್ ನಲ್ಲಿ 10 ಲಕ್ಷ ರೂಪಾಯಿಗಳನ್ನು ಬೀದಿ ಬದಿ ವ್ಯಾಪಾರಸ್ಥರಿಗೆ ಮೀಸಲಿಡಬೇಕೆಂದು ನಗರಸಭೆ ಆಯುಕ್ತ ಶ್ರೀಕಾಂತ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

 ಈ ವೇಳೆ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲಿಯಾಜ್, ತಾಲ್ಲೂಕು ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ಗೋಪಾಲ್ ಕೆ.ಎಸ್, ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಶ್, ಸಂಯೋಜಕ ತಿಮ್ಮರಾಯಪ್ಪ, ನಿರ್ದೇಶಕರಾದ ಮಹೇಶ್, ವೆಂಕಟರವಣಪ್ಪ, ಗೋವಿಂದಪ್ಪ, ಲಕ್ಷ್ಮೀದೇವಿ, ಮುನಿರತ್ನಮ್ಮ, ಪಾರ್ವತಮ್ಮ, ಬಾಬಾಜಾನ್ ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!