Home News ಶಿಡ್ಲಘಟ್ಟ ನಗರಸಭೆ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ: ಜೆಡಿಎಸ್ ಪಕ್ಷದಿಂದ ವಿಪ್ ಜಾರಿ

ಶಿಡ್ಲಘಟ್ಟ ನಗರಸಭೆ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ: ಜೆಡಿಎಸ್ ಪಕ್ಷದಿಂದ ವಿಪ್ ಜಾರಿ

0
Sidlaghatta CMC City Municipal Council President No confidence Motion JDS Whip

ಜನವರಿ 19 ರ ಬುಧವಾರದಂದು ಶಿಡ್ಲಘಟ್ಟ ನಗರಸಭೆ ಅಧ್ಯಕ್ಷೆ ಸಿ.ಎಂ.ಸುಮಿತ್ರ ರಮೇಶ ಅವರ ವಿರುದ್ದ ಮಂಡಿಸಿರುವ ಅವಿಶ್ವಾಸ ನಿರ್ಣಯದ ವಿರುದ್ಧ ಶಿಡ್ಲಘಟ್ಟ ನಗರ ಸಭೆಯ ಎಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ ಚುನಾಯಿತರಾದ ಎಲ್ಲಾ 10 ಜನ ಚುನಾಯಿತ ಸದಸ್ಯರುಗಳು ಮತ ಚಲಾಯಿಸಬೇಕೆಂದು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು ಪಕ್ಷದ ಪರವಾಗಿ ವಿಫ್ (ಸಚೇತನ) ನೀಡಿದ್ದಾರೆ.

 ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಶಿಡ್ಲಘಟ್ಟ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ.ಬಿ.ವೆಂಕಟೇಶ್, ಅವಿಶ್ವಾಸ ನಿರ್ಣಯದ ದಿನದಂದು ಸಾಮಾನ್ಯ ಸಭೆಯಲ್ಲಿ ಹಾಜರಿದ್ದು, ಅವಿಶ್ವಾಸ ನಿರ್ಣಯ ವಿರುದ್ಧ ಮತ ಚಲಾಯಿಸಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷರ ಪರವಾಗಿ ಪಕ್ಷದ ಪರವಾಗಿ ವಿಫ್‌ನ್ನು ಜಾರಿ ಮಾಡಿರುವುದಾಗಿ ತಿಳಿಸಿದ್ದಾರೆ.

 ವಿಫ್‌ ಅನ್ನು ಉಲ್ಲಂಘಿಸಿದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version