
ಶಿಡ್ಲಘಟ್ಟ ನಗರಸಭೆ ವತಿಯಿಂದ ಸೋಮವಾರ ಕ್ಲೀನ್ ಇಂಡಿಯಾ ಅಭಿಯಾನದ ಅಂಗವಾಗಿ ಸ್ವಚ್ಚತೆ ಹಾಗೂ ಪ್ಲಾಸ್ಟಿಕ್ ನಿಷೇಧದ ಕುರಿತು ಆಯೋಜಿಸಲಾಗಿದ್ದ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ ಮಾತನಾಡಿದರು.
ನಗರದ ಸ್ವಚ್ಚತೆ ಕಾಪಾಡುವುದು ಹಾಗೂ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ನಾಗರಿಕರ ಸಹಕಾರ ಅತ್ಯಗತ್ಯ ಎಂದು ಅವರು ಹೇಳಿದರು.
ಪರಿಸರ ಸಂರಕ್ಷಣೆ ಹಾಗೂ ಸ್ವಚ್ಚತೆ ಕಾಪಾಡಬೇಕಾದರೆ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧವಾಗಬೇಕು. ಪ್ಲಾಸ್ಟಿಕ್ ಬಳಕೆಯಿಂದ ಮಣ್ಣು, ನೀರು, ನಮ್ಮ ಸುತ್ತಮುತ್ತಲಿನ ಜೀವಸಂಕುಲ ಸೇರಿದಂತೆ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಾರುಕಟ್ಟೆಗೆ ತೆರಳಿದಾಗ ಪ್ಲಾಸ್ಟಿಕ್ ಕವರ್‌ಗಳನ್ನು ಬಳಸದೇ, ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಗಳನ್ನು ಬಳಸಿದಲ್ಲಿ ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಹುಟ್ಟಿದ ಅಕ್ಟೋಬರ್ ತಿಂಗಳು ಪೂರ್ತಿ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ನಗರದಾದ್ಯಂತ ಸ್ವಚ್ಚತೆ ಕಾಪಾಡುವುದು ಮತ್ತು ಪ್ಲಾಸ್ಟಿಕ್ ಬಳಕೆ ಮಾಡದಂತೆ ಜನರಲ್ಲಿ ಮನವರಿಕೆ ಮಾಡಿಕೊಡುವ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ನಗರದ ಮುಖ್ಯರಸ್ತೆಗಳಲ್ಲಿರುವ ಡಿವೈಡರ್ ಗಳು ಹಾಗೂ ನಗರ ವ್ಯಾಪ್ತಿಯಲ್ಲಿರುವ ಕಲ್ಯಾಣಿಗಳನ್ನು ಸ್ವಚ್ಚ ಮಾಡುವ ಕಾರ್ಯ ಮಾಡಲಾಗುತ್ತದೆ ಎಂದರು.
ನಗರದ ಕೋಟೆ ವೃತ್ತ, ಅಶೋಕರಸ್ತೆ, ವಾಸವಿ ರಸ್ತೆ, ಸಂತೆ ಮೈದಾನ, ಬಸ್ ನಿಲ್ದಾಣ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಪೌರಕಾರ್ಮಿಕರು ಮತ್ತು ಅಧಿಕಾರಿಗಳು ಪ್ಲಾಸ್ಟಿಕ್ ಬಳಸದಂತೆ ಜನರಿಗೆ ತಿಳಿಹೇಳುತ್ತಾ ಮೆರವಣಿಗೆ ಮೂಲಕ ಸಾಗಿದರು.
ಈ ಸಂದರ್ಭದಲ್ಲಿ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮುರಳಿ, ವ್ಯವಸ್ಥಾಪಕ ನಾಗರಾಜ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi