Home News ಶಿಡ್ಲಘಟ್ಟದಲ್ಲಿ ರಾಜಕೀಯ ಹೈಡ್ರಾಮಾ; ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದರೇ ರಾಜೀವ್ ಗೌಡ?

ಶಿಡ್ಲಘಟ್ಟದಲ್ಲಿ ರಾಜಕೀಯ ಹೈಡ್ರಾಮಾ; ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದರೇ ರಾಜೀವ್ ಗೌಡ?

0
Sidlaghatta Rajeev gowda Municipal Commissioner

Sidlaghatta : ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯು ಜಿಲ್ಲಾ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಘಟನೆಯ ಹಿನ್ನೆಲೆ:

ನಗರದ ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ನಗರಸಭೆ ಸಿಬ್ಬಂದಿ ನಿಯಮಾನುಸಾರ ತೆರವುಗೊಳಿಸಿದ್ದರು. ಈ ಕ್ರಮದಿಂದ ಕೆರಳಿದ ರಾಜೀವ್ ಗೌಡ ಅವರು ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಫೋನ್ ಕರೆ ಮಾಡಿ, ಅತ್ಯಂತ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.

ಆರೋಪಗಳ ಪ್ರಕಾರ, ರಾಜೀವ್ ಗೌಡ ಅವರು ಕೇವಲ ನಿಂದಿಸುವುದಲ್ಲದೆ:

ಪೌರಾಯುಕ್ತೆಯನ್ನು ಬೆಂಕಿ ಹಾಕಿ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಚಪ್ಪಲಿಯಲ್ಲಿ ಹೊಡೆಸುವುದಾಗಿ ಮತ್ತು ನಗರದಲ್ಲಿ ದಂಗೆ ಎಬ್ಬಿಸುವುದಾಗಿ ಎಚ್ಚರಿಸಿದ್ದಾರೆ.

ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ ಹಾಕಿರುವ ಸಂಭಾಷಣೆ

https://www.sidlaghatta.com/wp-content/uploads/2026/01/Sequence-05_9.mp3

ಇದೇ ವೇಳೆ ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಹಾಗೂ ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ವಿರುದ್ಧವೂ ಅಶ್ಲೀಲ ಪದಬಳಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಭಯಭೀತರಾದ ಸಿಬ್ಬಂದಿ:

ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಉನ್ನತ ಮಟ್ಟದ ರಾಜಕೀಯ ಮುಖಂಡರೊಬ್ಬರು ಈ ರೀತಿ ಬಹಿರಂಗವಾಗಿ ಬೆದರಿಕೆ ಹಾಕಿರುವುದು ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ. “ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ” ಎಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version