Home News ನಗರದ ತ್ಯಾಜ್ಯದಿಂದ ಗೊಬ್ಬರ ತಯಾರಿಸಲಾಗುವುದು – ನಗರಸಭೆ ಅಧ್ಯಕ್ಷೆ ಸುಮಿತ್ರ ರಮೇಶ್

ನಗರದ ತ್ಯಾಜ್ಯದಿಂದ ಗೊಬ್ಬರ ತಯಾರಿಸಲಾಗುವುದು – ನಗರಸಭೆ ಅಧ್ಯಕ್ಷೆ ಸುಮಿತ್ರ ರಮೇಶ್

0
Sidlaghatta City Municipality Solid Waste Management Unit

ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿ ಗ್ರಾಮದ ಬಳಿಯಿರುವ ಕಸ ವಿಲೇವಾರಿ ಘಟಕದಲ್ಲಿ ಗುರುವಾರ 15 ನೇ ಹಣಕಾಸು ಯೋಜನೆಯಡಿ ಸುಮಾರು 15.25 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ಶೌಚಾಲಯ ನಿಮಾಣ ಹಾಗು 13 ಲಕ್ಷ ರೂ ವೆಚ್ಚದಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಗರಸಭೆ ಅಧ್ಯಕ್ಷೆ ಸುಮಿತ್ರ ರಮೇಶ್ ಮಾತನಾಡಿದರು.

ನಗರದಾದ್ಯಂತ ಪ್ರತಿನಿತ್ಯ ಸಂಗ್ರಹಿಸುವ ಕಸ ಕಡ್ಡಿ, ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಕಸ ವಿಲೇವಾರಿ ಘಟಕದಲ್ಲಿ ಈಗಾಗಲೇ ಸಾಕಷ್ಟು ಕಾಮಗಾರಿಗಳು ನಡೆದಿದೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಿದ ಕಸವನ್ನು ಗೊಬ್ಬರವನ್ನಾಗಿ ಮಾಡಿ ರೈತರಿಗೆ ವಿತರಿಸಲು ಬೇಕಾದ ಎಲ್ಲಾ ಕಾಮಗಾರಿಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು.

ಉಪಾಧ್ಯಕ್ಷ ಅಫ್ಸರ್‌ಪಾಷ ಮಾತನಾಡಿ, ನಗರದ ಸ್ವಚ್ಚತೆ ಕಾಪಾಡುವುದು ಸೇರಿದಂತೆ ನಗರದಾದ್ಯಂತ ಸಂಗ್ರಹಿಸಿದ ಕಸವನ್ನು ವೈಜ್ಞಾನಿಕ ಪದ್ದತಿಯಲ್ಲಿ ಗೊಬ್ಬರವನ್ನಾಗಿ ಮಾಡಿ ರೈತರಿಗೆ ವಿತರಿಸುವ ಗುರಿ ಹೊಂದಿದ್ದೇವೆ ಎಂದರು.

ನಗರದಾದ್ಯಂತ ನೀರಿನ ಅಭಾವ ನೀಗಿಸಲು ನಗರೋತ್ಥಾನ 3 ನೇ ಹಂತದ ಯೋಜನೆಯಡಿ ಸುಮಾರು ನಾಲ್ಕು ಕೋಟಿ ಯಷ್ಟು ಅನುದಾನ ಮೀಸಲಿಟ್ಟಿದ್ದು ಸುಮಾರು 60-70 ಕೊಳವೆ ಬಾವಿ ಕೊರೆಸಲು ಮುಂದಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಂಜುನಾಥ್, ಶ್ರೀನಿವಾಸ್, ಮುಖಂಡರಾದ ಲಕ್ಷ್ಮಿನಾರಾಯಣ (ಲಚ್ಚಿ), ಎಸ್.ಎಂ.ರಮೇಶ್, ನವೀನ್, ಬಾಲು, ಅನ್ಸರ್, ನಿಜಾಮ್, ಗುತ್ತಿಗೆದಾರ ಕೆ.ಬಿ.ಮಂಜುನಾಥ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version