Muttur, sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ಬುಧವಾರ ಗ್ರಾಮದೇವತೆ ಗಂಗಾದೇವಿಯ ಜಾತ್ರೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಬುಧವಾರ ಬೆಳಗಿನ ಜಾವ ದೀಪಾರತಿಗಳು ನಡೆದವು. ದೇವರನ್ನು ಗ್ರಾಮದಲ್ಲಿ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮಹಿಳೆಯರು ತಂಬಿಟ್ಟು ದೀಪಗಳನ್ನು ತಂದು ದೇವಿಗೆ ಬೆಳಗಿ ಪೂಜೆ ಸಲ್ಲಿಸಿದರು.
“ನಮ್ಮ ಮುತ್ತೂರು ಗ್ರಾಮದ ಅಧಿದೇವತೆ ಗಂಗಾದೇವಿ ತಾಯಿಯು ಮಳೆ ಬೆಳೆಯನ್ನು ನೀಡಿ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ಪ್ರತಿವರ್ಷ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ. ಸುತ್ತಲಿನ ಹಲವಾರು ಗ್ರಾಮಗಳಿಂದ ಆಗಮಿಸುವ ಭಕ್ತರು ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ. ನಮ್ಮ ಗ್ರಾಮಗಳಿಂದ ಬೇರೆ ಊರುಗಳಿಗೆ ಮದುವೆಯಾಗಿ ಹೋಗಿರುವ ಹೆಣ್ಣುಮಕ್ಕಳು ತಮ್ಮ ತವರುಮನೆಗೆ ಬಂದು ಅಮ್ಮನವರ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ” ಎಂದು ಗ್ರಾಮಸ್ಥರು ತಿಳಿಸಿದರು.