Sidlaghatta : ಶಿಡ್ಲಘಟ್ಟ ನಗರದ ನಲ್ಲಿಮರದಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಅಕ್ಕಾಯಮ್ಮ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿ.ಮಂಜುನಾಥ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಕ್ಕಾಯಮ್ಮ ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಮಂಜುನಾಥ್ ಇವರಿಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷೆಯನ್ನು ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಅವರ ಬೆಂಬಲಿಗರು ಹೂ ಹಾರ ಹಾಕಿ ಅಭಿನಂದಿಸಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಿರ್ದೇಶಕರಾದ ಡಾಲ್ಫಿನ್ ನಾಗರಾಜ್, ನರಸಿಂಹಮೂರ್ತಿ, ಎಂ.ಮುರಳಿ, ಕೃಷ್ಣ, ಸುಬ್ರಮಣಿ, ಗಂಗರಾಜ್, ಎಸ್.ಮಂಜುನಾಥ್, ಲಕ್ಷ್ಮಮ್ಮ, ಮುರಳಿ ಕೃಷ್ಣ, ಮುಖಂಡರಾದ ಡಿ.ಎಂ.ಜಗದೀಶ್ವರ್, ಸುರೇಶ್, ನಾಗರಾಜ್, ಶ್ರೀನಾಥ್ ಹಾಜರಿದ್ದರು.
For Daily Updates WhatsApp ‘HI’ to 7406303366









