
Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಯುವಕ ಎಂ.ರಾಕೇಶ್ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡೆಯಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಪಂಜಾಬ್ ನ ತಲ್ವಾಂಡಿ ಸಾಬೊದಲ್ಲಿರುವ, ಗುರು ಕಾಶಿ ವಿಶ್ವವಿದ್ಯಾಲಯ ಕ್ರೀಡಾ ಸಂಕೀರ್ಣದಲ್ಲಿ ಇತ್ತೀಚೆಗೆ ನಡೆದ 45 ನೇ ರಾಷ್ಟ್ರೀಯ ಮಾಜಿ ಸೈನಿಕರ ಅಥ್ಲೆಟಿಕ್ ಚಾಂಪಿಯನ್ಶಿಪ್ ಗೆ ಆಯ್ಕೆಯಾಗಿದ್ದ ಎಂ.ರಾಕೇಶ್ ಅವರು, ಅಥ್ಲೆಟಿಕ್ಸ್ ಗುಂಡು ಎಸೆತ ಸ್ಪರ್ಧೆಯಲ್ಲಿ ಕೇವಲ ಆರು ಇಂಚಿನ ಕಡಿಮೆ ಅಂತರದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಬೆಳ್ಳಿ ಪದಕ ಪಡೆದಿದ್ದಾರೆ.
ಕ್ರೀಡಾಪಟು ರಾಕೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹುಟ್ಟಿದ ನನಗೆ ಕ್ರೀಡೆಯಲ್ಲಿ ಆಸಕ್ತಿ ಹೊಂದಲು, ಪ್ರೋತ್ಸಾಹಿಸಿದ್ದು ನನ್ನ ತಂದೆ, ತಾಯಿ, ಮತ್ತು ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡುವಂತೆ ಸ್ಪೂರ್ತಿ ತುಂಬಿದ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರ ಪ್ರೋತ್ಸಾಹದಿಂದ ಸಾಧನೆ ಮಾಡಲು ಸಾಧ್ಯವಾಯಿತು. ಸಾಧಿಸಬೇಕು ಎನ್ನುವ ಛಲವಿದ್ದರೆ, ನಮ್ಮ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ ಎಂದರು.