Sidlaghatta : ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 498 ಪ್ರಕರಣಗಳು ಇತ್ಯರ್ಥಗೊಂಡು 3 ಕೋಟಿ 8 ಲಕ್ಷ 94 ಸಾವಿರ 753 ರೂ ಪಾವತಿಸಲಾಗಿದೆ.
ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ.ಸಿ.ಎಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ವಿವಿಧ ರೀತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು
ಸಂಧಾನಕಾರರಾಗಿ ವಕೀಲರಾದ ಬಿ.ಎನ್.ವೇಣುಗೋಪಾಲ್ ಮತ್ತು ಸಿ.ಲಕ್ಷ್ಮಮ್ಮ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್ ಹಾಜರಿದ್ದರು.








