Sidlaghatta : ಜಂಗಮಕೋಟೆ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಈ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಯಣ್ಣಂಗೂರು, ಹೊಸಪೇಟೆ, ಬೈರಸಂದ್ರ, ನಾಗಮಂಗಲ, ಜಂಗಮಕೋಟೆ, ಸುಗಟೂರು, ಬಳವನಹಳ್ಳಿ, ಜೆ.ವೆಂಕಟಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನವೆಂಬರ್ 14 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.