
Sidlaghatta : ಶಿಡ್ಲಘಟ್ಟ ನಗರದ ಪೊಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ, ಕಳ್ಳತನವಾಗಿದ್ದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇದಾಯತ್ ಎಂಬುವವರು ಸರ್ಕಾರಿ ಆಸ್ಪತ್ರೆಯ ಬಳಿ ಬಿಟ್ಟಿದ್ದ ತಮ್ಮ ದ್ವಿಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ಪಿ.ಎಸ್.ಐ ವೇಣುಗೋಪಾಲ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶೀನಿವಾಸಪುರ ನಿವಾಸಿ ಸೈಯಾದ್ ಯಾಸೀನ್ ಪಾಷ ಎಂಬ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿ ಅವನಿಂದ ಐದು ದ್ವಿಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.