Home News ಸ್ವಂತ ಖರ್ಚಿನಲ್ಲಿ ಧ್ವಜಸ್ಥಂಭ ನಿರ್ಮಾಣಕ್ಕೆ ಮುಂದಾದ PSI

ಸ್ವಂತ ಖರ್ಚಿನಲ್ಲಿ ಧ್ವಜಸ್ಥಂಭ ನಿರ್ಮಾಣಕ್ಕೆ ಮುಂದಾದ PSI

0
Sidlaghatta Rural Police Station PSI Independence Day Flag Pole Construction

Sidlaghatta : ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ನಮಗೆ ಲಭಿಸಿರುವ ಸ್ವಾತಂತ್ರ್ಯವನ್ನು ದೇಶದ ಅಭ್ಯುದಯಕ್ಕೆ ಬಳಸಿಕೊಂಡು, ಪ್ರತಿಯೊಬ್ಬರು ದೇಶಪ್ರೇಮವನ್ನು ಬೆಳೆಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಸಂಭ್ರಮದಿಂದ ಆಚರಿಸಬೇಕೆಂದು ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ (Rural Police Station) PSI ಕೆ.ಸತೀಶ್ ತಿಳಿಸಿದರು.

ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಧ್ವಜ ಸ್ಥಂಭವನ್ನು (Flag Pole) ನಿರ್ಮಿಸಲು ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.

 ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ನಡೆಸುತ್ತಿದ್ದು, ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ. ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರ ಧ್ವಜರೋಹಣವನ್ನು ನೇರವೇರಿಸಿ ದೇಶಾಭಿಮಾನವನ್ನು ಮೆರೆಯಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಸೈಯೀದಾ ಇಷರತ್, ಜಮೀಲಾ, ಸಿ.ಎಲ್.ಸತೀಶ್, ಗೋಪಾಲಕೃಷ್ಣ, ಅನ್ನಪೂರ್ಣ ಹಿರೇಮಠ, ಆರ್.ಮಧುಸುಧನ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version