23.1 C
Sidlaghatta
Tuesday, March 21, 2023

ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ವಾಸವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ಸಮೂಹ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮವನ್ನು ಉದ್ಘಾಟಿಸಿ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರು ಮಾತನಾಡಿದರು.

ಸಾವಿರಾರು ವರ್ಷಗಳ ಇತಿಹಾಸ ಇರುವ ಸುಂದರ ಸಾಂಸ್ಕೃತಿಕ ಹಿನ್ನಲೆ ಇರುವ ಭಾರತದಲ್ಲಿ ವಿಭಿನ್ನ ಸಂಸ್ಕೃತಿಗಳನ್ನು ಕಾಣಬಹುದು. ಈ ವೈವಿಧ್ಯಮಯ ಭಾರತದ ಹಲವು ಮುಖಗಳನ್ನು ಹಾಗೂ ಬಣ್ಣಗಳನ್ನು ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ಕಾಣುವಂತಾಗಿದೆ. ಭಾರತ ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮುವ ವೇದಿಕೆಯನ್ನು ಸೃಷ್ಟಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಜಾನಪದ ಕಲೆ, ಸಾಹಿತ್ಯ ಅಪಾರವಾಗಿದ್ದು ಪ್ರತಿಭಾನ್ವಿತರನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕೆಂದು ಹೇಳಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಪ್ರತಿಭೆಯನ್ನು ಕೇವಲ ಪಠ್ಯ ಪುಸ್ತಕಗಳಿಂದ ಹಾಗೂ ಅಂಕಗಳಿಂದ ನೋಡದೆ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರಿಂದ ಪ್ರತಿಭಾನ್ವಿತರಿಗೆ ಅವಕಾಶ ಸಿಗಲಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರ್ಕಾರ ತರಲು ಉದ್ದೇಶಿಸಿರುವ ಹಿನ್ನಲೆಯಲ್ಲಿ ಈಗಲೇ ಕಾರ್ಯೋನ್ಮುಖರಾಗಬೇಕೆಂದರು.

ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಎ. ಕೃಷ್ಣಯ್ಯಶೆಟ್ಟಿ, ವಿಸ್ಡಂ ನಾಗರಾಜ್, ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರೂಪಸಿರಮೇಶ್, ಡಾಲ್ಫಿನ್ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಚಂದನಾ ಅಶೋಕ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಟೌನ್‌ ಕ್ಲಸ್ಟರ್ ನ 30 ಕ್ಕೂ ಅಧಿಕ ಶಾಲೆಯ ಮಕ್ಕಳು ವಿವಿಧ ಸಾಂಸ್ಕೃತಿಕ ಹಾಗೂ ವಿವಿಧ ವೇಷಭೂಷಣ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ ರೆಡ್ಡಿ, ಇಸಿಒ ಭಾಸ್ಕರ್ ಗೌಡ, ಪರಿಮಳ, ಸಮನ್ವಯಾಧಿಕಾರಿ ತ್ಯಾಗರಾಜ್, ಡಾಲ್ಫಿನ್ ಶಾಲೆಯ ಮುಖ್ಯಶಿಕ್ಷಕ ಮುನಿಸ್ವಾಮಪ್ಪ, ದಾಕ್ಷಾಯಣಿ, ಸಿ.ಆರ್.ಪಿ. ವೀಣಾ ಹಾಜರಿದ್ದರು.

Melur

Melur Pratibha Karanji Programme

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ 2022-23 ನೇ ಸಾಲಿನ ಮೇಲೂರು ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್ ಅವರು ಮಾತನಾಡಿದರು.

ಸರ್ಕಾರ ಕಳೆದ 20 ವರ್ಷಗಳಿಂದ ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಹೊರಹೊಮ್ಮಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಹಿಂದೆ ಪ್ರತಿಭೆ ಅನಾವರಣಕ್ಕೆ ಯಾವುದೇ ಅವಕಾಶಗಳಿರಲಿಲ್ಲ. ಆದರೆ ಇದೀಗ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ತುಂಬಾ ಅವಕಾಶಗಳಿದ್ದು ಅದನ್ನು ಪ್ರತಿಯೊಂದು ಮಗುವೂ ಬಳಸಿಕೊಂಡು ಬೆಳೆಯಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುತ್ತಿರುತ್ತವೆ. ಶಿಕ್ಷಕರು ಕಾಲಕಾಲಕ್ಕೆ ತಮ್ಮ ಶಾಲೆಯ ಮಕ್ಕಳನ್ನು ಅಂತಹ ಸ್ಪರ್ಧೆಗಳಿಗೆ ಕಳುಹಿಸಿಕೊಡಬೇಕು. ಸ್ಪರ್ಧೆಯಲ್ಲಿ ಸೋಲು ಗೆಲುವುಗಳು ಸಹಜವಾಗಿದ್ದು, ಸೋಲನ್ನು ಮುಂದಿನ ಸ್ಪರ್ಧೆಯ ಮೆಟ್ಟಿಲೆಂದು ಮಕ್ಕಳು ಭಾವಿಸಬೇಕು ಎಂದರು.

ಮೇಲೂರು, ಮಳ್ಳೂರು, ಮುತ್ತೂರು, ಗಂಗನಹಳ್ಳಿ, ಕಾಚಹಳ್ಳಿ, ಅಪ್ಪೇಗೌಡನಹಳ್ಳಿ, ಚೌಡಸಂದ್ರ, ಕೇಶವಪುರ, ಲಕ್ಕಹಳ್ಳಿ, ಎಲ್.ಮುತ್ತುಕದಹಳ್ಳಿ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವನತಾ ತಿರುಮಲೇಶ್, ಪಿಡಿಓ ಶಾರದ, ಸದಸ್ಯರಾದ ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ದೇವರಾಜ್, ಸವಿತಾ ಗೋಪಾಲ್, ಸಿ.ಆರ್.ಪಿ ಶೀಲಾ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕರು ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!