Home News ದ್ವಿತೀಯ PUC ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ

ದ್ವಿತೀಯ PUC ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ

0
Sidlaghatta Government Pre University College PUC Students Felicitation

Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (Government Pre University College) ಶನಿವಾರ ಕಾಲೇಜು ಪ್ರಾರಂಭೋತ್ಸವ ಹಾಗೂ ದ್ವಿತೀಯ PUC ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Felicitation) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

2nd PUC ಯಲ್ಲಿ 85% ಹೆಚ್ಚು ಅಂಕ ಪಡೆದ ವಿಜ್ಞಾನ, ಕಲೆ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಯಿತು.

ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಮಾತನಾಡಿದ ಪ್ರಾಂಶುಪಾಲ ಎಚ್. ಎನ್. ಶಂಭುಲಿಂಗೇಶ್ ಅವರು “ಕಾಲೇಜಿನಲ್ಲಿ ಬೋಧನೆ ಮಾಡುತ್ತಿರುವ ನುರಿತ ಉಪನ್ಯಾಸಕರ ಅನುಭವವನ್ನು ಬಳಸಿಕೊಂಡು ಮಕ್ಕಳು ಉತ್ತಮ ಸಾಧನೆ ಮಾಡಿ ಗುರುಹಿರಿಯರಿಗೆ ಒಳ್ಳೆಯ ಹೆಸರನ್ನು ತರಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಎಚ್. ಸಿ. ಮುನಿರಾಜು, ಉಪನ್ಯಾಸಕರಾದ ಲಕ್ಷ್ಮಯ್ಯ, ಶಿವಾರೆಡ್ಡಿ, ಶ್ರೀನಿವಾಸಾಚಾರಿ, ಶಮಾ, ಅರ್ಚನಾ, ರಮೇಶ್, ಶ್ರೀಧರ್, ಚಂದ್ರಶೇಖರ್, ನವೀನ್, ಮುರಳಿ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version