Sidlaghatta : “ಕಾನೂನು ಅಥವಾ ಪೊಲೀಸರು ಹಾಕುವ ದಂಡಕ್ಕೆ ಹೆದರಿ ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದಲ್ಲ. ನಮ್ಮ ರಕ್ಷಣೆ ಮತ್ತು ನಮ್ಮ ಮೇಲೆ ಅವಲಂಬಿತವಾಗಿರುವ ಕುಟುಂಬದ ಹಿತದೃಷ್ಟಿಯಿಂದ ಹೆಲ್ಮೆಟ್ ಧರಿಸುವುದು ಪ್ರತಿಯೊಬ್ಬರ ಕರ್ತವ್ಯ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.
ನಗರದ ಮಯೂರ ವೃತ್ತದ ಬಿಜೆಪಿ ಸೇವಾ ಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ ಅಂಗವಾಗಿ ರಾಮಚಂದ್ರಗೌಡ ಫೌಂಡೇಷನ್ (RCG Foundation) ವತಿಯಿಂದ ಹಮ್ಮಿಕೊಂಡಿದ್ದ ಹೆಲ್ಮೆಟ್ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀವ ಉಳಿಸುವ ನಿಯಮಗಳು: ಕೇವಲ ಹೆಲ್ಮೆಟ್ ಧರಿಸುವುದು ಮಾತ್ರವಲ್ಲದೆ, ಸಂಚಾರಿ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ರಸ್ತೆ ಸುರಕ್ಷತೆಯು ರಾಷ್ಟ್ರೀಯ ಸಂಪತ್ತಾದ ಮಾನವ ಜೀವಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸೇವೆ ಮತ್ತು ಆದರ್ಶಗಳು ಇಂದಿಗೂ ನಮಗೆ ಮಾದರಿ ಎಂದು ಅವರು ಸ್ಮರಿಸಿದರು.
ಬೈಕ್ ರ್ಯಾಲಿ ಮೂಲಕ ಜಾಗೃತಿ: ಕಾರ್ಯಕ್ರಮದ ನಂತರ ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು. ಬಳಿಕ ಹೆಲ್ಮೆಟ್ ಧರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ. ರಾಜಣ್ಣ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ಕಂಬದಹಳ್ಳಿ ಸುರೇಂದ್ರಗೌಡ ಹಾಗೂ ಚಿಂತಾಮಣಿ ಮತ್ತು ಶಿಡ್ಲಘಟ್ಟದ ಹಲವು ಮುಖಂಡರು ಭಾಗವಹಿಸಿದ್ದರು.
ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರನ್ನು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು ಎಂದು ಮಾಜಿ ಸಂಸದ ಎಸ್. ಮುನಿಸ್ವಾಮಿ ಆಗ್ರಹಿಸಿದರು.
ಕಲ್ಟ್ ಚಲನಚಿತ್ರದ ಪ್ರಚಾರ ಕಾರ್ಯಕ್ರಮಕ್ಕಾಗಿ ಕಟ್ಟಿದ್ದ ಫ್ಲೆಕ್ಸ್ ತೆರವುಗೊಳಿಸಿದ್ದಕ್ಕಾಗಿ ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ರಾಜೀವ್ ಗೌಡ ಮೊಬೈಲ್ ಕರೆ ಮಾಡಿ ಅಸಭ್ಯವಾಗಿ ಮಾತನಾಡಿ ಗುಂಡಾವರ್ತನೆ ಮಾಡಿರುವುದನ್ನು ನಾನು ಮತ್ತು ನಮ್ಮ ಪಕ್ಷ ಖಂಡಿಸುತ್ತದೆ ಎಂದರು.
ಹೆಣ್ಣು ಮಗಳ ಮೇಲೆ ದರ್ಪಮೆರೆದಿರುವ ರಾಜೀವ್ ಗೌಡನ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು. ಆ ವ್ಯಕ್ತಿಯ ನಡುವಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನ ತೋರುತ್ತದೆ ಎಂದು ಆಪಾದಿಸಿದ ಅವರು ನಗರಠಾಣೆಯಲ್ಲಿ ರಾಜೀವ್ ಗೌಡರ ವಿರುದ್ದ ದೂರು ನೀಡಿದರು.








